alex Certify ರ್ಯಾಪಿಡೊ ಬೈಕ್ ಚಲಾಯಿಸುತ್ತಿದ್ದ ಮಹಿಳೆಗೆ ಕಿರುಕುಳ: ಯುವಕನಿಂದ ಅಸಭ್ಯ ವರ್ತನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರ್ಯಾಪಿಡೊ ಬೈಕ್ ಚಲಾಯಿಸುತ್ತಿದ್ದ ಮಹಿಳೆಗೆ ಕಿರುಕುಳ: ಯುವಕನಿಂದ ಅಸಭ್ಯ ವರ್ತನೆ

ನೆಲಮಂಗಲ: ರ್ಯಾಪಿಡೊ ಬೈಕ್ ಚಲಾಯಿಸುತ್ತಿದ್ದ ಮಹಿಳೆಗೆ ಹಿಂಬದಿ ಕುಳಿತಿದ್ದ ಯುವಕ ಕಿರುಕುಳ ನೀಡಿದ್ದು, ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಹೆಚ್ ಎಂಟಿ ಬಳಿ ನಡೆದಿದೆ.

ಜೈಪುರ ಮೂಲದ ಯುವಕ ಮಹೇಶ್ (27) ಎಂಬಾತ ರ್ಯಾಪಿಡೊ ಬೈಕ್ ಚಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಯುವಕನ ವಿರುದ್ಧ 35 ವರ್ಷದ ಮಹಿಳೆ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಜಾಲಹಳ್ಳಿಯ ಹೆಚ್ ಎಂಟಿಯಿಂದ ದಾಸರಹಳ್ಳಿಗೆ ಬರುವ ಮಾರ್ಗ ಮಧ್ಯೆ ಯುವಕ ಕಿರುಕುಳ ನೀಡಿದ್ದಾನೆ. ತಕ್ಷಣ ಬೈಕ್ ನಿಲ್ಲಿಸಿದ ಮಹಿಳೆ ಹೊಯ್ಸಳ ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿ ಯುವಕನನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...