ತುಮಕೂರು: ದೂರು ನೀಡಲು ಬಂದಿದ್ದ ಮಹಿಳೆಯೊಂದಿಗೆ ಕಚೇರಿಯಲ್ಲಿಯೇ ರಾಸಲೀಲೆ ನಡೆಸಿದ್ದ ಮಧುಗಿರಿ ಉಪವಿಭಾಗದ ಡಿವೈ ಎಸ್ ಪಿ ರಾಮಚಂದ್ರಪ್ಪ ಜೈಲುಪಾಲಾಗಿದ್ದಾರೆ.
ಜಮೀನು ವ್ಯಾಜ್ಯ ವಿಚಾರವಾಗಿ ದೂರು ನೀಡಲು ಬಂದಿದ್ದ ಪಾವಗಡ ಮೂಲದ ಮಹಿಳೆಯನ್ನು ಮಾತುಕತೆಗೆ ಎಂದು ಕಚೇರಿಗೆ ಕರೆಸಿಕೊಂಡಿದ್ದ ಡಿವೈಎಸ್ ಪಿ ರಾಮಚಂದ್ರಪ್ಪ, ಮಹಿಳೆಯನ್ನು ಪುಸಲಾಯಿಸಿ ಕಚೇರಿಯಲ್ಲಿಯೇ ಲೈಂಗಿಕ ದೌರ್ಜನ್ಯವೆಸಗಿದ್ದ. ಮಹಿಳೆಯ ಜೊತೆ ಕಚೇರಿಯಲ್ಲಿಯೇ ರಾಸಲೀಲೆಯಲ್ಲಿ ತೊಡಗಿದ್ದ ಡಿವೈಎಸ್ ಪಿ ವಿಡಿಯೋವನ್ನು ಸ್ಥಳದಲ್ಲಿದ್ದವರಾರೋ ರೆಕಾರ್ಡ್ ಮಾಡಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಿನ್ನೆ ರಾತ್ರಿ ಡಿವೈ ಎಸ್ ಪಿ ರಾಮಚಂದ್ರಪ್ಪನನ್ನು ಪೊಲೀಸರು ಬಂಧಿಸಿದ್ದರು.
ಇಂದು ಮಧುಗಿರಿ ಜೆ ಎಂ ಎಫ್ ಸಿ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಲಯ ಆರೋಪಿ ಡಿವೈಎಸ್ ಪಿ ರಾಮಚಂದ್ರಪ್ಪಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಡಿವೈಎಸ್ ಪಿಯನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ರವಾನಿಸಲಾಗಿದೆ.