alex Certify ಆಟವಾಡುವಾಗಲೇ ಕಾದಿತ್ತು ದುರ್ವಿಧಿ, ಆಕಸ್ಮಿಕವಾಗಿ ಇಲಿ ಪಾಷಾಣ ಸೇವಿಸಿದ ಕಂದಮ್ಮ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಟವಾಡುವಾಗಲೇ ಕಾದಿತ್ತು ದುರ್ವಿಧಿ, ಆಕಸ್ಮಿಕವಾಗಿ ಇಲಿ ಪಾಷಾಣ ಸೇವಿಸಿದ ಕಂದಮ್ಮ ಸಾವು

ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲ್ಲೂಕಿನ ಬಜತ್ತೂರು ಗ್ರಾಮದ ಕೆಮ್ಮಾರದಲ್ಲಿ ಆಟವಾಡುವಾಗ ಆಕಸ್ಮಿಕವಾಗಿ ಇಲಿ ಪಾಷಾಣ ಸೇವಿಸಿ ಎರಡೂವರೆ ವರ್ಷದ ಕಂದಮ್ಮ ಸಾವನ್ನಪ್ಪಿದೆ.

ನಿವೃತ್ತ ಸೈನಿಕ ಸೈಜು ಮತ್ತು ದೀಪ್ತಿ ದಂಪತಿಯ ಪುತ್ರಿ ಶ್ರೇಯಾ ಮೃತಪಟ್ಟ ಮಗು ಎಂದು ಹೇಳಲಾಗಿದೆ. ಮನೆಯನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಇಲಿ ಪಾಷಾಣದ ಟ್ಯೂಬ್ ಅನ್ನು ನಾಯಿಗೂಡಿನ ಬಳಿ ಇಡಲಾಗಿದೆ. ಆಟವಾಡುತ್ತಾ ಅಲ್ಲಿಗೆ ಬಂದ ಮಗು ಇಲಿ ಪಾಷಾಣ ತಿಂದಿದೆ. ಕೆಲಸದಲ್ಲಿ ಮಗ್ನರಾಗಿದ್ದ ಮನೆಯವರು ಇದನ್ನು ಗಮನಿಸಿರಲಿಲ್ಲ. ತೀವ್ರ ಅಸ್ವಸ್ಥರಾಗಿದ್ದ ಮಗುವನ್ನು ತಕ್ಷಣವೇ ಉಪ್ಪಿನಂಗಡಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...