ಹೊಸಪೇಟೆ: ರಥದ ಚಕ್ರದಡಿ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆ ಹೊರವಲಯದ ಜಂಬುನಾಥೇಶ್ವರನ ಜಾತ್ರಾ ಮಹೋತ್ಸವದಲ್ಲಿ ಅವಘಡ ಸಂಭವಿಸಿದೆ.
ರಥ ಕಟ್ಟುವ ಕೆಲಸ ಮಾಡುತ್ತಿದ್ದ ರಾಮು(53) ಮೃತಪಟ್ಟವರು ಎಂದು ಹೇಳಲಾಗಿದೆ. ಬಾಳೆಹಣ್ಣಿನ ಮೇಲೆ ಕಾಲಿಟ್ಟು ಜಾರಿ ಬಿದ್ದ ಅವರು ರಥದ ಚಕ್ರಕ್ಕೆ ಸಿಲುಕಿದ್ದಾರೆ. ಗಾಯಾಳುವನ್ನು ಹೊಸಪೇಟೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಹೊಸಪೇಟೆ ನಿವಾಸಿ ರಾಮು ಮೃತಪಟ್ಟಿದ್ದಾರೆ. ಹೊಸಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.