
ವಿಜಯಪುರ: ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ.
ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರೆಯಲ್ಲಿ ದುರ್ಘಟನೆ ಸಂಭವಿಸಿದೆ. ಜಾತ್ರೆಯಲ್ಲಿ ರಥ ಎಳೆಯುವಾಗ ನೂಕು ನುಗ್ಗಲು ಉಂಟಾಗಿದ್ದು, ರಥದ ಗಾಲಿಗೆ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡ ಮತ್ತೊಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇಂಡಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.