
ಬಳ್ಳಾರಿ: ಅನ್ನಭಾಗ್ಯ ಯೋಜನೆಯಡಿ ಜೂನ್ ತಿಂಗಳ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗೆ 14 ಕೆಜಿ ಜೋಳ ಮತ್ತು ಪಿ.ಹೆಚ್.ಹೆಚ್ ಫಲಾನುಭವಿಗಳಿಗೆ 2 ಕೆಜಿ ಜೋಳ ಹಾಗೂ ಎಎವೈ ಪಡಿತರ ಚೀಟಿಗೆ 21 ಕೆಜಿ ಅಕ್ಕಿ ಮತ್ತು ಪಿ.ಹೆಚ್.ಹೆಚ್ ಫಲಾನುಭವಿಗಳಿಗೆ 3 ಕೆ.ಜಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ.
ಅಂತ್ಯೋದಯ ಅನ್ನ ಯೋಜನೆ ಹಾಗೂ ಆದ್ಯತಾ ಪಡಿತರ ಚೀಟಿದಾರರು ಹತ್ತಿರದ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.