ಬೆಂಗಳೂರು: ಪಡಿತರ ಚೀಟಿದಾರರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬಯೋಮೆಟ್ರಿಕ್ ಇಲ್ಲದಿದ್ದರೂ ಪಡಿತರ ನೀಡಲಾಗುವುದು ಎಂದು ಹೇಳಲಾಗಿದೆ.
ವಿಧಾನಪರಿಷತ್ ನಲ್ಲಿ ಸದಸ್ಯ ಎಸ್. ರವಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು, ವೃದ್ಧರು ಸೇರಿದಂತೆ ಕೆಲವು ಕಾರ್ಮಿಕರ ಬೆರಳು ಸವೆದು ಬಯೋಮೆಟ್ರಿಕ್ ಪಡೆಯಲು ಸಾಧ್ಯವಾಗದ ಕಾರಣ ಅಂತವರಿಗೆ ಬಯೋಮೆಟ್ರಿಕ್ ಪಡೆಯದೆ ಪಡಿತರ ವಿತರಿಸಲಾಗುವುದು ಎಂದು ಹೇಳಿದ್ದಾರೆ.
ಬಯೋಮೆಟ್ರಿಕ್ ಪಡೆಯುವಲ್ಲಿ ಕಾರ್ಮಿಕರು, ವೃದ್ಧರಿಗೆ ಬೆರಳು ಸವೆದು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಯೋಮೆಟ್ರಿಕ್ ಹೊರತುಪಡಿಸಿ ಶೇಕಡ 2 ರಷ್ಟು ಫಲಾನುಭವಿಗಳಿಗೆ ಪಡಿತರ ಹಂಚಿಕೆಗೆ ಅವಕಾಶವಿದ್ದು, ಅಗತ್ಯವಾದಲ್ಲಿ ಇನ್ನಷ್ಟು ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.