ಕೇಂದ್ರ ಸರ್ಕಾರದ ಪಿಎಂಜಿಕೆಎವೈ ಯೋಜನೆಯಡಿ ಮೇ ಮತ್ತು ಜೂನ್ ಮಾಹೆಯಲ್ಲಿ ಬಿಪಿಎಲ್(ಆದ್ಯತಾ) ಪಡಿತರ ಚೀಟಿ ಕುಟುಂಬದ ಪ್ರತೀ ಸದಸ್ಯರಿಗೆ 5 ಕೆಜಿ ಹಾಗೂ ರಾಜ್ಯದ ಎನ್‍ಎಫ್‍ಎಸ್‍ಎ ಯೋಜನೆಯಡಿ 5 ಕೆಜಿ ಅಕ್ಕಿ ಒಟ್ಟು 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವುದು. ಪ್ರತೀ ಪಡಿತರ ಚೀಟಿಗೆ 2 ಕೆಜಿ ಗೋಧಿಯನ್ನು ಸಹ ಉಚಿತವಾಗಿ ವಿತರಿಸಲಾಗುವುದು.
ಎಎವೈ(ಆದ್ಯತಾ) ಪಡಿತರ ಚೀಟಿದಾರರಿಗೆ ಪಿಎಂಜಿಕೆಎವೈ ಯೋಜನೆಯಡಿ ಮೇ ಮತ್ತು ಜೂನ್-2021 ರ ಮಾಹೆಯಲ್ಲಿ ಪಡಿತರ ಚೀಟಿ ಕುಟುಂಬದ ಪ್ರತೀ ಸದಸ್ಯರಿಗೆ 5 ಕೆ.ಜಿ ಹಾಗೂ ರಾಜ್ಯದ ಎನ್‍ಎಫ್‍ಎಸ್‍ಎ ಯೋಜನೆಯಡಿ ಪ್ರತೀ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ.
ದತ್ತಾಂಶದಲ್ಲಿ ಪಡಿತರ ಪಡೆಯಲು ನೋಂದಾಯಿಸಿಕೊಂಡಂತಹ ಎಪಿಎಲ್ ಪಡಿತರ ಚೀಟಿದಾರರ ಒಬ್ಬ ಸದಸ್ಯರುಳ್ಳ ಪಡಿತರ ಚೀಟಿದಾರರಿಗೆ 5 ಕೆ.ಜಿ ಹಾಗೂ ಒಂದಂಕ್ಕಿಂತ ಹೆಚ್ಚಿನ ಸದಸ್ಯರುಳ್ಳ ಪಡಿತರ ಚೀಟಿದಾರರಿಗೆ 10 ಕೆ.ಜಿ ಅಕ್ಕಿಯನ್ನು ಪ್ರತೀ ಕೆ.ಜಿಗೆ ರೂ 15 ರಂತೆ ಪಡೆದು ವಿತರಿಸಲಾಗುವುದು.
ಕೋವಿಡ್-19 ವೈರಸ್ ಹರಡುವ ಭೀತಿ ಇರುವುದರಿಂದ ಜಿಲ್ಲೆಯ ಆದ್ಯತಾ(ಬಿಪಿಎಲ್ ಮತ್ತು ಎಎವೈ) ಪಡಿತರ ಚೀಟಿಗಳ ಕುಟುಂಬದ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗೆ ತೆರಳಿ ಕೋವಿಡ್ ಮಾರ್ಗಸೂಚಿಯಂತೆ ನಿಗಧಿತ ಅವಧಿಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ನೂಕು ನುಗ್ಗಲಿಗೆ ಅವಕಾಶ ನೀಡದೆ ಪಡಿತರ ಆಹಾರ ಧಾನ್ಯಗಳನ್ನು ಪಡೆದುಕೊಳ್ಳಬೇಕೆಂದು ಮಡಿಕೇರಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕರು ಕೋರಿದ್ದಾರೆ.