ಬೆಂಗಳೂರು: ಉಚಿತ ಆಹಾರಧಾನ್ಯ, ಖಾತೆಗೆ ಹೆಚ್ಚುವರಿ ಅಕ್ಕಿಯ ಹಣ ಮೊದಲಾದ ಸೌಲಭ್ಯಗಳಿಗಾಗಿ ಬಿಪಿಎಲ್, ಅಂತ್ಯೋದಯ ಕಾರ್ಡ್ ಪಡೆದುಕೊಳ್ಳಲು ಹೆಚ್ಚಿನವರು ಮುಂದಾಗುತ್ತಾರೆ.
ಆದರೆ, ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಇದ್ದರೂ 3.47 ಲಕ್ಷ ಫಲಾನುಭವಿಗಳು ನ್ಯಾಯಬೆಲೆ ಅಂಗಡಿಗಳಿಂದ ಆಹಾರ ಧಾನ್ಯವನ್ನೇ ಪಡೆದುಕೊಂಡಿಲ್ಲ. ಅಂತ್ಯೋದಯ ಕಾರ್ಡ್ ದಾರರಿಗೆ 35 ಕೆಜಿ ಅಕ್ಕಿ, ಬಿಪಿಎಲ್ ಕಾರ್ಡ್ ದಾರರಿಗೆ 5 ಕೆಜಿ ಅಕ್ಕಿ ಮತ್ತು ಹೆಚ್ಚುವರಿ 5 ಕೆಜಿ ಅಕ್ಕಿ ಹಣವನ್ನು ಖಾತೆಗೆ ಜಮಾ ಮಾಡಲಾಗುತ್ತದೆ.
ರಾಜ್ಯದಲ್ಲಿ 10.88 ಲಕ್ಷ ಅಂತ್ಯೋದಯ ಕಾರ್ಡ್ ದಾರರಲ್ಲಿ 14,826 ಮಂದಿ ಪಡಿತರ ಪಡೆದುಕೊಂಡಿಲ್ಲ. 1.16 ಕೋಟಿ ಬಿಪಿಎಲ್ ಕಾರ್ಡ್ ದಾರರ ಪೈಕಿ 3.32 ಲಕ್ಷ ಬಿಪಿಎಲ್ ಕಾರ್ಡ್ ಫಲಾನುಭವಿಗಳು ಆರು ತಿಂಗಳಿನಿಂದ ಆಹಾರ ಧಾನ್ಯ ಪಡೆದುಕೊಂಡಿಲ್ಲ. ಖಾತೆಗೆ ಹೆಚ್ಚುವರಿ ಅಕ್ಕಿಯ ಹಣ ಪಡೆಯಲು ದಾಖಲೆ ಕೂಡ ಸಲ್ಲಿಸಿಲ್ಲ ಎಂದು ಹೇಳಲಾಗಿದೆ.
ಕೆಲವರು ಪಿಂಚಣಿ, ಕಿಸಾನ್ ಸಮಾನ್ ಯೋಜನೆ ಸಹಾಯಧನ ಮೊದಲಾದ ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಬಿಪಿಎಲ್ ಕಾರ್ಡ್ ಮಾಡಿಸಿಕೊಂಡಿದ್ದಾರೆ. ಆದರೆ, ಪಡಿತರ ಪಡೆದುಕೊಳ್ಳುತ್ತಿಲ್ಲ ಎನ್ನಲಾಗಿದೆ.