ರಾಯಚೂರು: ಅಂತ್ಯೋದಯ ಮತ್ತು ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಚೀಟಿಯಲ್ಲಿನ ಪ್ರತಿ ಸದ್ಯಸರಿಗೆ 5 ಕೆಜಿ ಅಕ್ಕಿ ನೀಡಲಾಗುವುದು.
ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ರಾಯಚೂರು, ದೇವದುರ್ಗ, ಮಾನವಿ, ಲಿಂಗಸುಗೂರು ತಾಲ್ಲೂಕುಗಳಲ್ಲಿನ ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿ ಮತ್ತು ಸಿಂಧನೂರು ತಾಲ್ಲೂಕಿನ ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಪಡಿತರ ಚೀಟಿಗೆ 19 ಕೆ.ಜಿ ಅಕ್ಕಿ ಮತ್ತು 16 ಕೆ.ಜಿ ಜೋಳ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಹಾಗೂ ಪ್ರತಿ ಬಿಪಿಎಲ್ ಪಡಿತರ ಚೀಟಿಗೆ 2 ಕೆ.ಜಿ ಗೋಧಿ ಉಚಿತವಾಗಿ ವಿತರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರು ತಿಳಿಸಿದ್ದಾರೆ.
ಎಪಿಎಲ್ ಪಡಿತರ ಚೀಟಿದಾರರಿಗೆ ರಿಯಾಯಿತಿ ದರದಲ್ಲಿ ಪ್ರತಿ ಕೆ.ಜಿಗೆ 15 ರೂ.ನಂತೆ ಏಕ ಸದಸ್ಯರ ಪಡಿತರ ಚೀಟಿಗೆ 5 ಕೆ.ಜಿ ಅಕ್ಕಿ, ಹೆಚ್ಚಿನ ಕುಟುಂಬ ಸದಸ್ಯರಿರುವ ಎ.ಪಿ.ಎಲ್ ಪಡಿತರ ಚೀಟಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.
ಅಂತರ್ ರಾಜ್ಯ, ಅಂತರ್ ಜಿಲ್ಲೆ ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಕೋವಿಡ್-19 ಸೊಂಕು ಹರುಡುತ್ತಿರುವ ಹಿನ್ನಲೆಯಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಪಡಿತರ ಪಡೆಯುವ ಸಮಯದಲ್ಲಿ ಸೋಪ್ ಮತ್ತು ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸಬೇಕು.
ಯಾವುದೇ ನ್ಯಾಯಬೆಲೆ ಅಂಗಡಿಕಾರರು ಕಡಿಮೆ ಪ್ರಮಾಣದ ಪಡಿತರವನ್ನು ವಿತರಣೆ ಮಾಡಿದ್ದಲ್ಲಿ, ಹಣ ಕೇಳಿದ್ದಲ್ಲಿ ಮತ್ತು ಇತರೆ ದೂರುಗಳಿಗೆ ದೂರವಾಣಿ ಸಂಖ್ಯೆ 1967ಗೆ ಹಾಗೂ ತಾಲ್ಲೂಕಿನಲ್ಲಿರುವ ತಹಶೀಲ್ದಾರ್ ಕಚೇರಿಗೆ ಅಥವಾ ಜಿಲ್ಲೆಯ ಉಪನಿದೇರ್ಶಕರ ಕಛೇರಿಗೆ ದೂರನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಲಾಗಿದೆ.