ದಾವಣಗೆರೆ; ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಆಗಸ್ಟ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ ಅಕ್ಕಿ ಮತ್ತು ರಾಗಿ 14ಕೆಜಿ ಪ್ರತಿ ಕಾರ್ಡಿಗೆ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3ಕೆಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆ.ಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆಜಿ ಗೆ 15 ರೂ.ರಂತೆ ಒಪ್ಪಿಗೆ ನೀಡಿದ ಎಪಿಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10ಕೆಜಿ ಅಕ್ಕಿಯನ್ನು ವಿತರಿಸಲಾಗುವುದು.
ಪಡಿತರ ಚೀಟಿಗಳಲ್ಲಿ ಎಸ್.ಸಿ, ಎಸ್.ಟಿ ಕುಟುಂಬದ ಮಾಹಿತಿಯನ್ನು ನವೀಕರಿಸಲು ಕಾರ್ಡುದಾರರು ತಮ್ಮ ಪಡಿತರ ಚೀಟಿಯ ಜೆರಾಕ್ಸ್ ಮತ್ತು ಂಎSಏ ವತಿಯಿಂದ ನೀಡಲಾದ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯನ್ನು ನಿಮ್ಮ ನ್ಯಾಯ ಬೆಲೆ ಅಂಗಡಿಗೆ ನೀಡಬೇಕು ಎಂದು ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ತಿಳಿಸಿದ್ದಾರೆ.