alex Certify BPL, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಅನ್ನಭಾಗ್ಯ ಯೋಜನೆಯಡಿ ಅಕ್ಕಿ, ಕುಚಲಕ್ಕಿ, ರಾಗಿ, ಜೋಳ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BPL, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಅನ್ನಭಾಗ್ಯ ಯೋಜನೆಯಡಿ ಅಕ್ಕಿ, ಕುಚಲಕ್ಕಿ, ರಾಗಿ, ಜೋಳ ವಿತರಣೆ

ಬೆಳಗಾವಿ: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಮಾಸಿಕ 35 ಕೆಜಿ ಪಡಿತರ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ.

ಬಡತನ ರೇಖೆಗಿಂತ ಕೆಳಗಿರುವ ಪ್ರತಿ ಸದಸ್ಯನಿಗೆ 5 ಕೆಜಿ ಆಹಾರ ಧಾನ್ಯ, ಅಂತ್ಯೋದಯ ಅನ್ನಭಾಗ್ಯ ಯೋಜನೆಯಡಿ ಪ್ರತಿ ಕಾರ್ಡಿಗೆ 35 ಕೆಜಿ ಆಹಾರಧಾನ್ಯ ನೀಡಲಾಗುವುದು. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಹಾಗೂ ಸರ್ಕಾರದ ಆದೇಶದ ಅನುಸಾರ ಪ್ರತಿ ಸದಸ್ಯರಿಗೆ 5 ಕೆಜಿ ಆಹಾರ ಧಾನ್ಯದ ಪ್ರಮಾಣದಲ್ಲಿ ಬದಲಾವಣೆ ಮಾಡಿಲ್ಲ.

ಭೌಗೋಳಿಕ ಆಹಾರ ಪದ್ಧತಿಗೆ ಅನುಗುಣವಾಗಿ ದಕ್ಷಿಣ ಭಾಗದ 12 ಜಿಲ್ಲೆಗಳಲ್ಲಿ ಪ್ರತಿ ಸದಸ್ಯರಿಗೆ 3 ಕೆಜಿ ರಾಗಿ, 2 ಕೆಜಿ ಅಕ್ಕಿ ನೀಡಲಾಗುತ್ತದೆ. ಉತ್ತರಭಾಗದ 12 ಜಿಲ್ಲೆಗಳಲ್ಲಿ ಪ್ರತಿ ಸದಸ್ಯನಿಗೆ 3 ಕೆಜಿ ಜೋಳ, 2 ಕೆಜಿ ಅಕ್ಕಿ ವಿತರಿಸಲಾಗುವುದು. ಉಳಿದ 6 ಜಿಲ್ಲೆಗಳಲ್ಲಿ 2 ಕೆಜಿ ಕುಚುಲಕ್ಕಿ, 3 ಕೆಜಿ ಅಕ್ಕಿ ವಿತರಿಸಲಾಗುತ್ತದೆ.

ರಾಜ್ಯದಲ್ಲಿನ ಅಂತ್ಯೋದಯ ಕಾರ್ಡ್ ಫಲಾನುಭವಿಗಳಿಗೆ 35 ಕೆಜಿ ಆಹಾರಧಾನ್ಯ ನೀಡಲಾಗುವುದು. ಬಿಪಿಎಲ್ ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ತಲಾ 5 ಕೆಜಿ ಆಹಾರ ಧಾನ್ಯ ವಿತರಿಸಲಾಗುವುದು. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಮೇ ಮತ್ತು ಜೂನ್ ತಿಂಗಳಲ್ಲಿ ಪ್ರತಿ ಸದಸ್ಯರಿಗೆ ತಲಾ 5 ಕೆಜಿ ಅಕ್ಕಿ ವಿತರಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...