alex Certify ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್

ನವದೆಹಲಿ: ಪಡಿತರ ಚೀಟಿ ಯೋಜನೆಯಡಿ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೋಗುವವರಿಗೆ ಸಮಾಧಾನದ ಸುದ್ದಿಯಿದೆ. ಒಂದೆಡೆ ಸರ್ಕಾರ ಉಚಿತ ಪಡಿತರ ಅವಧಿಯನ್ನು ಡಿಸೆಂಬರ್‌ವರೆಗೆ ವಿಸ್ತರಿಸಿದೆ. ಮೋದಿ ಸರ್ಕಾರದ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಲಾಗಿದ್ದು, ನಂತರ ಎಲ್ಲಾ ಅಂಗಡಿಗಳಲ್ಲಿ ಆನ್‌ಲೈನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್(ಪಿಒಎಸ್) ಸಾಧನಗಳನ್ನು ಕಡ್ಡಾಯಗೊಳಿಸಲಾಗಿದೆ.

ರಾಷ್ಟ್ರೀಯ ಆಹಾರ ಭದ್ರತಾ ಕಾನೂನಿನಡಿಯಲ್ಲಿ ಕಾರ್ಡ್ ಹೊಂದಿರುವವರಿಗೆ ಸರಿಯಾದ ಪ್ರಮಾಣದ ಆಹಾರ ಧಾನ್ಯಗಳು ಲಭ್ಯವಾಗುವಂತೆ ಖಚಿತಪಡಿಸಿಕೊಳ್ಳಲು ಪಡಿತರ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ಮಾಪಕಗಳೊಂದಿಗೆ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್(ಇಪಿಒಎಸ್) ಸಾಧನಗಳನ್ನು ಲಿಂಕ್ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ನಿಯಮಗಳನ್ನು ತಿದ್ದುಪಡಿ ಮಾಡಲಾಗಿದೆ.

ದೇಶಾದ್ಯಂತ ಹೊಸ ನಿಯಮ ಜಾರಿ

ಈಗ ದೇಶದ ಎಲ್ಲಾ ನ್ಯಾಯಬೆಲೆ ಅಂಗಡಿಗಳನ್ನು ಆನ್‌ಲೈನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್(ಪಿಒಎಸ್) ಸಾಧನಗಳೊಂದಿಗೆ ಲಿಂಕ್ ಮಾಡಲಾಗಿದೆ. ಅಂದರೆ, ಈಗ ಪಡಿತರ ತೂಕದಲ್ಲಿ ವಂಚನೆಗಳಿಗೆ ಯಾವುದೇ ಅವಕಾಶವಿಲ್ಲ. ಸಾರ್ವಜನಿಕ ವಿತರಣಾ ವ್ಯವಸ್ಥೆಯ(ಪಿಡಿಎಸ್) ಫಲಾನುಭವಿಗಳು ಯಾವುದೇ ಸಂದರ್ಭದಲ್ಲಿ ಕಡಿಮೆ ಪಡಿತರವನ್ನು ಪಡೆಯಬಾರದು ಎಂದು ಖಚಿತಪಡಿಸಿಕೊಳ್ಳಲು, ಹೈಬ್ರಿಡ್ ಮಾದರಿಯ ಮಾರಾಟದ ಯಂತ್ರಗಳನ್ನು ಪಡಿತರ ವಿತರಕರಿಗೆ ನೀಡಲಾಗಿದೆ. ನೆಟ್‌ವರ್ಕ್ ಇಲ್ಲದಿದ್ದರೆ ಈ ಯಂತ್ರಗಳು ಆಫ್‌ಲೈನ್ ಮತ್ತು ಆನ್‌ಲೈನ್ ಮೋಡ್‌ನಲ್ಲಿ ಕಾರ್ಯನಿರ್ವಹಿಸುತ್ತವೆ. ಈಗ ಕಾರ್ಡ್ ಹೊಂದಿರುವವರು ತಮ್ಮ ಡಿಜಿಟಲ್ ಪಡಿತರ ಚೀಟಿಯನ್ನು ಬಳಸಿಕೊಂಡು ದೇಶದ ಯಾವುದೇ ನ್ಯಾಯಬೆಲೆ ಅಂಗಡಿಯಿಂದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಸರಕುಗಳನ್ನು ಪಡೆಯಲು ಸಾಧ್ಯವಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...