ಬೆಂಗಳೂರು: ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವ ಅವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಪಡಿತರ ಕಾರ್ಡ್ ಗೆ ಸಲ್ಲಿಕೆಯಾದ ಅರ್ಜಿಗಳ ಪೈಕಿ 1.73 ಲಕ್ಷ ಅರ್ಜಿದಾರರಿಗೆ ಶೀಘ್ರವೇ ಪಡಿತರ ಚೀಟಿ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಬಿಜೆಪಿಯ ಪ್ರತಾಪ ಸಿಂಹ ನಾಯಕ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಪಡಿತರ ಚೀಟಿಗಾಗಿ 2,95,986 ಅರ್ಜಿಗಳು ಸಲ್ಲಿಕೆಯಾಗಿವೆ. ಇವುಗಳಲ್ಲಿ ಪರಿಶೀಲನೆಯ ಬಳಿಕ 55,950 ಅರ್ಜಿಗಳು ಬಿಪಿಎಲ್ ಅಡಿಯಲ್ಲಿ ಬರುವುದಿಲ್ಲ ಎಂದು ತಿಳಿದು ಬಂದಿದೆ. ಬಾಕಿ ಇರುವ 1.73 ಲಕ್ಷ ಅರ್ಜಿಗಳ ಪರಿಶೀಲನೆ ನಡೆಸಿ ಪಡಿತರ ಕಾರ್ಡ್ ಗಳನ್ನು ವಿತರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.