ಶಿವಮೊಗ್ಗ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ವಾರ್ಷಿಕ 1.20 ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಹೊಂದಲು ಅನರ್ಹವಾಗಿರುವವರು, ಕುಟುಂಬದವರು ಸ್ವಯಂ ಪ್ರೇರಿತರಾಗಿ ಕಚೇರಿಗೆ ವಾಪಸ್ ನೀಡುವಂತೆ ಸೂಚನೆ ನೀಡಿದೆ.
ಸರ್ಕಾರಿ ಅನುದಾನ ಪಡೆಯುತ್ತಿರುವ ಸಿಬ್ಬಂದಿ, ಸರ್ಕಾರಿ ಸ್ವಾಮ್ಯದ ಸಂಸ್ಥೆ, ಮಂಡಳಿ, ನಿಗಮ, ಸ್ವಯತ್ತ ಸಂಸ್ಥೆಯ ಅಧಿಕಾರಿಗಳು, ಸರ್ಕಾರಿ ನೌಕರರು, ವೃತ್ತಿ ತೆರಿಗೆ ಪಾವತಿಸುವ ನೌಕರರು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಗಿಂತ ಹೆಚ್ಚು ಒಣ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು, ನಗರ ಪ್ರದೇಶದಲ್ಲಿ 10 ಚ.ಕ್ಕಿಂತ ಹೆಚ್ಚು ವಿಸ್ತೀರ್ಣದ ಸ್ವಂತ ಆರ್‍ಸಿಸಿ ಮನೆ ಹೊಂದಿರುವವರು ಕಾರ್ಡ್ ಹೋಂದುವಂತಿಲ್ಲ.
ಸ್ವಂತ ಬಳಕೆಗೆ ನಾಲ್ಕು ಚಕ್ರದ ವಾಹನ ಹೊಂದಿರುವ ಕುಟುಂಬಗಳು, ಬಿಪಿಎಲ್ ಕಾರ್ಡ್ ಹೊಂದಲು ಅನರ್ಹರಾಗಿದ್ದು, ಮಾರ್ಚ್ 31 ರೊಳಗಾಗಿ ಸ್ವಯಂ ಪ್ರೇರಿತವಾಗಿ ಭದ್ರಾವತಿ ನಗರ ಆಹಾರ ಕಚೇರಿಗೆ ವಾಪಸ್ ನೀಡುವುದು. ತಪ್ಪಿದಲ್ಲಿ ಇಲಾಖೆ ಅಧಿಕಾರಿಗಳೇ ಕಾರ್ಯಾಚರಣೆ ನಡೆಸಿ ಅನರ್ಹರನ್ನು ಪತ್ತೆ ಹಚ್ಚಿ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಭದ್ರಾವತಿ ಆಹಾರ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.