ಬೆಂಗಳೂರು: 4 ಚಕ್ರದ ಸ್ವಂತ ಬಳಕೆ ವಾಹನ ಹೊಂದಿದವರ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು ಎಪಿಎಲ್ ಕಾರ್ಡ್ ಗೆ ಪರಿವರ್ತಿಸುವ ಪ್ರಕ್ರಿಯೆಗೆ ಆಹಾರ ಇಲಾಖೆ ತಡೆ ನೀಡಿದೆ.
ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್ ಗಳನ್ನು ಅಕ್ರಮವಾಗಿ ಪಡೆದುಕೊಂಡವರ ಪತ್ತೆ ಕಾರ್ಯಾಚರಣೆ ಕೈಗೊಂಡ ಆಹಾರ ಇಲಾಖೆ ಅನರ್ಹರ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುಗಳನ್ನು ರದ್ದುಪಡಿಸುವ ಇಲ್ಲವೇ ಎಪಿಎಲ್ ಗೆ ಪರಿವರ್ತಿಸುವ ಪ್ರಕ್ರಿಯೆ ಕೈಗೊಂಡಿದೆ.
ಆದಾಯ ತೆರಿಗೆ ಪಾವತಿಸುವವರು, ಸರ್ಕಾರಿ ನೌಕರರು, ಮೂರು ಹೆಕ್ಟೇರಿಗಿಂತ ಹೆಚ್ಚು ಕೃಷಿ ಜಮೀನು ಹೊಂದಿದವರು, 1.20 ಲಕ್ಷ ರೂ ಗಿಂತ ಹೆಚ್ಚು ಆದಾಯ ಹೊಂದಿದವರು ಮತ್ತು ನಾಲ್ಕು ಚಕ್ರದ ವೈಯಕ್ತಿಕ ವಾಹನ ಇರುವವರು ಬಿಪಿಎಲ್ ಅಥವಾ ಅಂತ್ಯೋದಯ ಪಡಿತರ ಚೀಟಿ ಪಡೆಯಲು ಅರ್ಹರಲ್ಲ ಎಂದು ಹೇಳಲಾಗಿತ್ತು. ಈಗ ಇದಕ್ಕೆ ಬ್ರೇಕ್ ಹಾಕಲಾಗಿದೆ.
4 ಚಕ್ರದ ವೈಯಕ್ತಿಕ ವಾಹನ ಹೊಂದಿರುವವರ ಆದ್ಯತಾ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಯಾಗಿ ಪರಿವರ್ತಿಸುವ ಆದೇಶಕ್ಕೆ ಸರ್ಕಾರ ತಡೆ ಹಿಡಿದಿದೆ.