ತಿಪಟೂರು: ಪಡಿತರ ಚೀಟಿಯಲ್ಲಿ ಇರುವ ಎಲ್ಲಾ ಸದಸ್ಯರ ಇ- ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ತಹಶೀಲ್ದಾರ್ ಪವನ್ ಕುಮಾರ್ ತಿಳಿಸಿದ್ದಾರೆ.
ಸೆಪ್ಟೆಂಬರ್ ಅಂತ್ಯದೊಳಗೆ ಎಲ್ಲಾ ಸದಸ್ಯರು ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಿಸುವಂತೆ ಸೂಚಿಸಲಾಗಿದ್ದು, ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರ ಮತ್ತು ಆಯುಕ್ತರ ಆದೇಶದಂತೆ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಪಡಿತರ ಚೀಟಿಗಳಲ್ಲಿನ ಮೃತ ಸದಸ್ಯರ ಹೆಸರನ್ನು ಡಿಲೀಟ್ ಮಾಡಿಸದೆ ಇದ್ದಲ್ಲಿ ತುರ್ತಾಗಿ ಮರಣ ಪ್ರಮಾಣ ಪತ್ರದೊಂದಿಗೆ ಮಾಹಿತಿ ನೀಡಿ ಮೃತ ಸದಸ್ಯರ ಹೆಸರುಗಳನ್ನು ವಜಾಗೋಳಿಸಬೇಕು. ತಪ್ಪಿದಲ್ಲಿ ನಿಯಮಾನಸಾರ ಕ್ರಮ ವಹಿಸಲಾಗುವುದು.
ತಾಲೂಕಿನಲ್ಲಿ 4615 ಸದಸ್ಯರು ಇನ್ನು ಇ-ಕೆವೈಸಿ ಮಾಡಿಸಿಲ್ಲ. ಹಾಗಾಗಿ ಈ ಸದಸ್ಯರು ಸೆಪ್ಟೆಂಬರ್ ಅಂತ್ಯದೊಳಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವಂತೆ ಸೂಚಿಸಲಾಗಿದೆ.