alex Certify Ration Card : ಇಂದಿನಿಂದ ಈ ಜಿಲ್ಲೆಗಳಲ್ಲಿ `ಪಡಿತರ ಚೀಟಿಯಲ್ಲಿ’ ಹೆಸರು ಸೇರ್ಪಡೆ\ತಿದ್ದುಪಡಿಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Ration Card : ಇಂದಿನಿಂದ ಈ ಜಿಲ್ಲೆಗಳಲ್ಲಿ `ಪಡಿತರ ಚೀಟಿಯಲ್ಲಿ’ ಹೆಸರು ಸೇರ್ಪಡೆ\ತಿದ್ದುಪಡಿಗೆ ಅವಕಾಶ

ಬೆಂಗಳೂರು : ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ\ತಿದ್ದುಪಡಿಗೆ ಆಹಾರ ಇಲಾಖೆಯು ಸೆಪ್ಟೆಂಬರ್ 14ರವರೆಗೆ ಅವಕಾಶ ನೀಡಿದ್ದು, ಮೂರು ಹಂತಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿ ಮಾಡಬಹುದಾಗಿದೆ.

ಸೆಪ್ಟೆಂಬರ್ 12ರಿಂದ 14ರವರೆಗೆ ಬೆಳಗಾವಿ, ಹಾವೇರಿ, ಬಾಗಲಕೋಟೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಗದಗ, ಮಂಡ್ಯ, ಉತ್ತರ ಕನ್ನಡ, ವಿಜಯಪುರ, ಮೈಸೂರು, ಕೊಡಗು, ಹಾವೇರಿ ಹಾಗೂ ಹಾಸನ ಜಿಲ್ಲೆಯಲ್ಲಿ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ, ಹೆಸರು ಸೇರ್ಪಡೆ/ತೆಗೆಯುವುದು, ವಿಳಾಸ ಬದಲಾವಣೆ, ಸದಸ್ಯರ ಹೆಸರು ತಿದ್ದುಪಡಿಗೆ ಸೆ.12ರಿಂದ 14ರವರೆಗೆ ಬೆಳಗ್ಗೆ 10ರಿಂದ ರಾತ್ರಿ 8ರವರೆಗೆ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಿದ್ದು, ನಿಗದಿಪಡಿಸಿದ ಅವಧಿಯೊಳಗೆ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪ್ರಕಟಣೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...