ಗ್ರಾಮ ಪಂಚಾಯಿತಿ ಚುನಾವಣೆ ನಂತರ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಧರ್ಮಸೇನ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೊರೋನಾ ಹಿನ್ನೆಲೆಯಲ್ಲಿ ಕಳೆದ ವರ್ಷ ಸಲ್ಲಿಕೆಯಾಗಿದ್ದ 1.88 ಲಕ್ಷ ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗಿದೆ. ಅಧಿಕಾರಿಗಳು ಮನೆ ಬಾಗಿಲಿಗೆ ತೆರಳಿ ಪರಿಶೀಲನೆ ನಡೆಸಬೇಕಿದೆ. ತಾತ್ಕಾಲಿಕವಾಗಿ ಪ್ರಕ್ರಿಯೆ ಸ್ಥಗಿತಗೊಂಡಿದ್ದು, ಗ್ರಾಮ ಪಂಚಾಯಿತಿ ಚುನಾವಣೆ ಮುಗಿದ ಪಡಿತರ ಚೀಟಿಗೆ ಸಲ್ಲಿಕೆಯಾದ ಅರ್ಜಿಗಳ ವಿಲೇವಾರಿ ಮಾಡಲಾಗುವುದು. ಹೊಸದಾಗಿ ಅರ್ಜಿ ಆಹ್ವಾನಿಸಲಾಗುವುದು ಎಂದು ತಿಳಿಸಿದ್ದಾರೆ.