ಬೆಂಗಳೂರು : ರೇಷನ್ ಪಡೆಯದ ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯು ಬಿಗ್ ಶಾಕ್ ನೀಡಿದೆ. ಒಟ್ಟು 3.26 ಲಕ್ಷ ಕಾರ್ಡ್ ಗಳನ್ನು ರದ್ದು ಮಾಡಲು ಆಹಾರ ಇಲಾಖೆ ಮುಂದಾಗಿದೆ.
ಆರು ತಿಂಗಳಿನಿಂದ ರೇಷನ್ ಪಡೆಯದ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುವ ಕುರಿತಂತೆ ಆಹಾರ ಇಲಾಖೆ ಚಿಂತನೆ ನಡೆಸಿದ್ದು, ಈ ಪೈಕಿ ಒಟ್ಟು 3.26 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಮುಂದಾಗಿದೆ. ರಾಜ್ಯಾದ್ಯಂತ 3.26 ಲಕ್ಷ ಬಿಪಿಎಲ್ ಕಾರ್ಡ್ದಾರರು ಆರು ತಿಂಗಳಿಂದ ರೇಷನ್ ಪಡೆಯುತ್ತಿಲ್ಲ ಎಂದು ಇಲಾಖೆ ಹೇಳಿದೆ.ಇಂತಹ ಕಾರ್ಡ್‌ಗಳ ರದ್ದತಿಗೆ ಸರ್ಕಾರ ಸೂಚನೆ ಕೊಟ್ಟಿದೆ.
ಆಸ್ಪತ್ರೆಗಳಲ್ಲಿ ಚಿಕಿತ್ಸೆ, ಪಿಂಚಣಿ ಹಾಗೂ ಆರ್‌ಟಿಇ ಅಡಿ ಶಿಕ್ಷಣ ಸೇರಿ ಹಲವು ಸರ್ಕಾರಿ ಸೌಕರ್ಯ , ಪಡೆದುಕೊಳ್ಳುವ ನಿಟ್ಟಿನಲ್ಲಿ ಲಕ್ಷಾಂತರ ಮಂದಿ ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ಆದರೂ ಕೆಲವರು ಆರು ತಿಂಗಳಿನಿಂದ ರೇಷನ್ ಪಡೆದಿಲ್ಲ.