
ಬೆಂಗಳೂರು : ಪಡಿತರ ಚೀಟಿಯಲ್ಲಿ ಹೊಸ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಆಹಾರ ಇಲಾಖೆ ಅವಕಾಶ ನೀಡಿದ್ದು, ಹೆಸರು ಸೇರ್ಪಡೆ, ತಿದ್ದುಪಡಿಗೆ ಅಕ್ಟೋಬರ್ 21 ಇಂದು ಕೊನೆಯ ಅವಕಾಶವಾಗಿದೆ.
ಬಳ್ಳಾರಿ, ಬಿದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ , ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಇಂದು ಕೊನೆಯ ಅವಕಾಶ ನೀಡಲಾಗಿದೆ.
ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡೆಗೆ ಪಡಿತರ ಚೀಟಿದಾರರು ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ಸೈಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು.