ಹುಬ್ಬಳ್ಳಿ: ಶೀಘ್ರವೇ ಹೊಸ ಪಡಿತರ ಚೀಟಿ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ಶುಕ್ರವಾರ ಹುಬ್ಬಳ್ಳಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹೊಸ ಪಡಿತರ ಚೀಟಿಗೆ 2.90 ಲಕ್ಷ ಅರ್ಜಿ ಸಲ್ಲಿಕೆಯಾಗಿದ್ದು, ಶೀಘ್ರವೇ ಅವುಗಳನ್ನು ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಿಸಲಾಗುವುದು ಎಂದು ಹೇಳಿದ್ದಾರೆ.
ಅನರ್ಹರು ಬಿಪಿಎಲ್ ಕಾರ್ಡ್ ಹೊಂದಿರುವುದು ಕಂಡುಬಂದಿದ್ದು, ಅಂತಹವರನ್ನು ಗುರುತಿಸಿ ಕಾರ್ಡ್ ಗಳನ್ನು ರದ್ದುಪಡಿಸಲಾಗುವುದು. ಪಡಿತರ ಅಕ್ಕಿ ಮಾರಾಟ ಮಾಡುವುದು ಕಂಡು ಬಂದಲ್ಲಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.