ಬೆಂಗಳೂರು: ಹೊಸ ಪಡಿತರ ಚೀಟಿ ಸದ್ಯಕ್ಕೆ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಡಾರಿಯವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ.
ರಾಜ್ಯದಲ್ಲಿ ಕೇಂದ್ರ ಸರ್ಕಾರ ನಿಗದಿಪಡಿಸಿದ ಪ್ರಮಾಣಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಅಂತ್ಯೋದಯ, ಆದ್ಯತಾ ಪಡಿತರ ಚೀಟಿ ವಿತರಿಸಲಾಗಿದೆ. ಹೀಗಾಗಿ ಹೊಸದಾಗಿ ಪಡಿತರ ಚೀಟಿ ವಿತರಣೆಗೆ ಆರ್ಥಿಕ ಇಲಾಖೆಯೊಂದಿಗೆ ಚರ್ಚೆ ನಡೆಸಿದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.
ಸದ್ಯ ರಾಜ್ಯದಲ್ಲಿ ಪಡಿತರ ಚೀಟಿ ಕೋರಿ ಸಲ್ಲಿಸಿರುವ ಅರ್ಜಿಗಳಲ್ಲಿ 2.95 ಲಕ್ಷ ಅರ್ಜಿಗಳ ವಿಲೇವಾರಿ ಬಾಕಿ ಇದೆ. ಕೇಂದ್ರ ನಿಗದಿಪಡಿಸಿದ ಪ್ರಮಾಣಕ್ಕಿಂತ ಹೆಚ್ಚುವರಿಯಾಗಿ 14.36 ಲಕ್ಷ ಅಂತ್ಯೋದಯ ಪಡಿತರ ಚೀಟಿ ವಿತರಿಸಿರುವುದರಿಂದ ಹೊಸದಾಗಿ ರೇಷನ್ ಕಾರ್ಡ್ ನೀಡುವ ಅವಕಾಶವಿಲ್ಲ. ಆದರೂ, ಪಡಿತರ ಚೀಟಿ ನೀಡುವ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಹೇಳಿದ್ದಾರೆ.