ಪಡಿತರ ಚೀಟಿ ಹೊಂದಿರುವವರಿಗೊಂದು ಮಹತ್ವದ ಸುದ್ದಿಯಿದೆ. ಕೊರೊನಾ ಅವಧಿಯಲ್ಲಿ ಬಡವರಿಗೆ ಸಹಾಯ ಮಾಡಲು, ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆ ಶುರು ಮಾಡಿತ್ತು. ಈ ಯೋಜನೆಯಡಿ 80 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಉಚಿತವಾಗಿ ಆಹಾರ ಧಾನ್ಯ ಒದಗಿಸಲಾಗ್ತಿದೆ. ಸಾಮಾನ್ಯ ಕೋಟಾದಲ್ಲಿ ಲಭ್ಯವಿರುವ ಆಹಾರ ಧಾನ್ಯಗಳ ಜೊತೆಗೆ ಪ್ರತಿ ವ್ಯಕ್ತಿಗೆ ತಿಂಗಳಿಗೆ 5 ಕೆಜಿ ಹೆಚ್ಚುವರಿ ಆಹಾರ ಧಾನ್ಯಗಳನ್ನು ನೀಡಲಾಗುತ್ತಿದೆ.
ಸರ್ಕಾರದ ಪ್ರಕಾರ, ಈವರೆಗೆ 600 ಲಕ್ಷ ಟನ್ ಆಹಾರ ಧಾನ್ಯಗಳನ್ನು ಈ ಯೋಜನೆಯಡಿ ಉಚಿತವಾಗಿ ಹಂಚಲಾಗಿದೆ. ಕೊರೊನಾ ಗಮನದಲ್ಲಿಟ್ಟುಕೊಂಡು, ಸರ್ಕಾರ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಿದೆ. ಅಂದ್ರೆ ನವೆಂಬರ್ ವರೆಗೆ ಬಡವರಿಗೆ ಉಚಿತ ಪಡಿತರ ಸಿಗಲಿದೆ. 5 ಕೆಜಿ ಆಹಾರ ಧಾನ್ಯಗಳನ್ನು ಬಡವರಿಗೆ ಉಚಿತವಾಗಿ ನೀಡಲಾಗುವುದು.
ಪಡಿತರ ಚೀಟಿಯಿಂದ ಇನ್ನೂ ಅನೇಕ ಪ್ರಯೋಜನಗಳಿವೆ. ಪಡಿತರ ಚೀಟಿಯನ್ನು ಗುರುತಿನ ಚೀಟಿಯಾಗಿಯೂ ಬಳಸಲಾಗುತ್ತದೆ. ಬ್ಯಾಂಕ್ ಸೇರಿದಂತೆ ಅನೇಕ ಕೆಲಸಗಳಿಗೆ ಇದನ್ನು ಗುರುತಿನ ದಾಖಲೆಯಾಗಿ ನೀಡಬಹುದು.
ರೇಷನ್ ಕಾರ್ಡ್ ಪಡೆಯಲು, ವ್ಯಕ್ತಿಯ ವಾರ್ಷಿಕ ಆದಾಯ 27 ಸಾವಿರ ರೂಪಾಯಿಗಳಿಗಿಂತ ಕಡಿಮೆಯಿರಬೇಕು. ರಾಜ್ಯದ ಅಧಿಕೃತ ವೆಬ್‌ಸೈಟ್‌ಗೆ ಹೋಗಬೇಕು. ಅಲ್ಲಿ ಪಡಿತರ ಚೀಟಿ ಆನ್ಲೈನ್ ಅರ್ಜಿ ಸಲ್ಲಿಕೆ ಮೇಲೆ ಕ್ಲಿಕ್ ಮಾಡಬೇಕು. ಆಧಾರ್ ಕಾರ್ಡ್, ವೋಟರ್ ಐಡಿ, ಪಾಸ್‌ಪೋರ್ಟ್, ಆರೋಗ್ಯ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಇತ್ಯಾದಿಗಳನ್ನು ಪಡಿತರ ಚೀಟಿ ಮಾಡಲು ದಾಖಲೆಯಾಗಿ ನೀಡಬಹುದು. ಅರ್ಜಿ ಭರ್ತಿ ಮಾಡಿದ ನಂತರ ಶುಲ್ಕ ಪಾವತಿ ಮಾಡಬೇಕು. ಇದು ಬೇರೆ ಬೇರೆ ರಾಜ್ಯದಲ್ಲಿ ಬೇರೆ ಬೇರೆಯಿದೆ. ಅರ್ಜಿ ಸಲ್ಲಿಕೆ ನಂತ್ರ ಅಧಿಕಾರಿಗಳು ಅದನ್ನು ಪರಿಶೀಲಿಸುತ್ತಾರೆ.