alex Certify ಪಡಿತರ ಚೀಟಿ ಹೊಂದಿದವರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಫಲಾನುಭವಿಗಳ ಮಾಹಿತಿ ತಿದ್ದುಪಡಿ, ಹೆಸರು ಸೇರ್ಪಡೆಗೆ ಸೆ. 14ರವರೆಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿ ಹೊಂದಿದವರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಫಲಾನುಭವಿಗಳ ಮಾಹಿತಿ ತಿದ್ದುಪಡಿ, ಹೆಸರು ಸೇರ್ಪಡೆಗೆ ಸೆ. 14ರವರೆಗೆ ಅವಕಾಶ

ಬೆಂಗಳೂರು: ಪಡಿತರ ಚೀಟಿಯಲ್ಲಿರುವ ಫಲಾನುಭವಿಗಳ ಮಾಹಿತಿ ತಿದ್ದುಪಡಿ ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ಸೆಪ್ಟೆಂಬರ್ 14ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9 ರಿಂದ 14ರ ವರೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಚೀಟಿ ಫಲಾನುಭವಿಗಳ ಮಾಹಿತಿ ತಿದ್ದುಪಡಿ, ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ಅವಕಾಶ ನೀಡಲಾಗಿದೆ.

ಸೆಪ್ಟೆಂಬರ್ 6 ರಿಂದ 8 ರವರೆಗೆ ಬಳ್ಳಾರಿ, ಚಿಕ್ಕಬಳ್ಳಾಪುರ, ಬೀದರ್, ಚಿತ್ರದುರ್ಗ, ದಾವಣಗೆರೆ, ಕೋಲಾರ, ಕಲಬುರಗಿ, ರಾಮನಗರ, ರಾಯಚೂರು, ಯಾದಗಿರಿ, ವಿಜಯನಗರ, ತುಮಕೂರು, ಶಿವಮೊಗ್ಗ ಜಿಲ್ಲೆಯ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸೆಪ್ಟೆಂಬರ್ 9 ರಿಂದ 11 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಫಲಾನಿಭವಿಗಳಿಗೆ ಮಾಹಿತಿ ತಿದ್ದುಪಡಿ, ಹೆಸರು ಸೇರ್ಪಡೆಗೆ ಅವಕಾಶ ಇದೆ.

ಸೆಪ್ಟಂಬರ್ 12ರ ರಿಂದ 14ರವರೆಗೆ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಬಾಗಲಕೋಟೆ, ಚಾಮರಾಜನಗರ, ಬೆಳಗಾವಿ, ಕೊಡಗು, ಹಾವೇರಿ, ಹಾಸನ, ಗದಗ, ಮೈಸೂರು, ಮಂಡ್ಯ, ಉತ್ತರ ಕನ್ನಡ, ಉಡುಪಿ, ವಿಜಯಪುರ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...