ಶಿವಮೊಗ್ಗ: ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಆಗಸ್ಟ್ 1 ರಿಂದ 10 ರವರೆಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಇದಕ್ಕೆ ಅವಕಾಶ ಕಲ್ಪಿಸಲಾಗಿದೆ.
ಇದುವರೆಗೆ ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿದಾರರು/ಕುಟುಂಬ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಉಚಿತವಾಗಿ ಇ-ಕೆವೈಸಿ ಮಾಡಿಸಲು ಸೂಚಿಸಲಾಗಿದೆ. ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆ ಸ್ಥಗಿತಗೊಳಿಸಲಾಗುವುದು ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.