ರಾಯಚೂರು: ಜಿಲ್ಲೆಯಲ್ಲಿ ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳಲ್ಲಿನ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಈ ತಿಂಗಳ ಅಂತ್ಯದವರೆಗೆ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸುವಂತೆ ಜಿಲ್ಲಾಧಿಕಾರಿ ಎಲ್. ಚಂದ್ರಶೇಖರ ನಾಯಕ ಅವರು ತಿಳಿಸಿದ್ದಾರೆ.
ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದಕ್ಕೆ ಪಡಿತರ ಚೀಟಿಯಲ್ಲಿನ ಸದಸ್ಯರು ಯಾವುದೇ ಹಣ ನೀಡುವಂತಿಲ್ಲ. ಯಾವುದಾದರೂ ದೂರುಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ: 1967 ಗೆ ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.