ಬೆಂಗಳೂರು: ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಕಾರ್ಡ್ ಇಲ್ಲದಿದ್ದರೂ ಉಚಿತವಾಗಿ ಪಡಿತರ ನೀಡಲು ಸರ್ಕಾರ ನಿರ್ಧರಿಸಿದೆ.
ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಉಚಿತವಾಗಿ ಪಡಿತರ ನೀಡಲಿದ್ದು, ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಪ್ರತಿ ಕೆಜಿಗೆ 15 ರೂಪಾಯಿ ದರದಲ್ಲಿ 10 ಕೆಜಿ ಅಕ್ಕಿ ವಿತರಿಸಲಾಗುತ್ತದೆ.
ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿರುವುದರಿಂದ ಬಡವರಿಗೆ ಅನುಕೂಲವಾಗುವಂತೆ ಸರ್ಕಾರ ಕ್ರಮಕೈಗೊಂಡಿದೆ. ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಎರಡು ತಿಂಗಳು ಉಚಿತವಾಗಿ ಪಡಿತರ ನೀಡಲಿದ್ದು, ಮೇ ಮತ್ತು ಜೂನ್ ತಿಂಗಳಲ್ಲಿ ಅರ್ಜಿದಾರರಿಗೆ ತಲಾ 10 ಕೆಜಿ ಅಕ್ಕಿ ನೀಡಲಾಗುವುದು. ಎಪಿಎಲ್ ಕಾರ್ಡ್ ದಾರರಿಗೆ ಕೆಜಿಗೆ 15 ರೂಪಾಯಿ ದರದಲ್ಲಿ 10 ಕೆಜಿ ಅಕ್ಕಿ ನೀಡಲಾಗುವುದು.
ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರು ಅರ್ಜಿ ಸಲ್ಲಿಸಿದ ಸ್ವೀಕೃತಿಯೊಂದಿಗೆ ಸಂಬಂಧಿತ ನ್ಯಾಯಬೆಲೆ ಅಂಗಡಿಗೆ ತೆರಳಿ ಬಯೋಮೆಟ್ರಿಕ್ ಅಥವಾ ಆಧಾರ್, ಓಟಿಪಿ ಮೂಲಕ ರೇಷನ್ ಪಡೆದುಕೊಳ್ಳುವಂತೆ ಆಹಾರ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.