ನವದೆಹಲಿ: 80 ಕೋಟಿ ಬಡವರಿಗೆ ಎರಡು ತಿಂಗಳು ಉಚಿತವಾಗಿ ರೇಷನ್ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರತಿ ವ್ಯಕ್ತಿಗೆ 5 ಕೆಜಿ ಆಹಾರ ಧಾನ್ಯ ನೀಡಲಿದ್ದು, ಇದಕ್ಕಾಗಿ 26,000 ಕೋಟಿ ರೂಪಾಯಿ ವೆಚ್ಚ ಮಾಡಲಾಗುವುದು.
ಕಳೆದ ವರ್ಷದಂತೆ ಈ ವರ್ಷವೂ ಬಡವರಿಗೆ ಎರಡು ತಿಂಗಳು ಉಚಿತ ಪಡಿತರ ನೀಡಲು ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಮೇ ಮತ್ತು ಜೂನ್ ತಿಂಗಳಲ್ಲಿ ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಉಚಿತವಾಗಿ ಪಡಿತರ ನೀಡಲಾಗುವುದು.
ಬಿಪಿಎಲ್ ಕುಟುಂಬದ ಪ್ರತಿ ವ್ಯಕ್ತಿಗೆ ಎರಡು ತಿಂಗಳು ತಲಾ 5 ಕೆಜಿ ಆಹಾರ ಧಾನ್ಯ ನೀಡಲಾಗುತ್ತದೆ. ಕಳೆದ ವರ್ಷ 5 ಕೆಜಿ ಆಹಾರ ಧಾನ್ಯದಲ್ಲಿ ಅಕ್ಕಿ, ಗೋಧಿ ಮತ್ತು ಬೇಳೆ ನೀಡಲಾಗಿತ್ತು. ಕೊರೋನಾ ಎರಡನೇ ಅಲೆಯಿಂದ ಸಂಕಷ್ಟದಲ್ಲಿರುವವರಿಗೆ ಅನುಕೂಲವಾಗುವಂತೆ ಆಹಾರಧಾನ್ಯ ನೀಡಲಾಗುವುದು ಎನ್ನಲಾಗಿದೆ.