alex Certify ಅಂತ್ಯೋದಯ, ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಉಚಿತ ರೇಷನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂತ್ಯೋದಯ, ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಉಚಿತ ರೇಷನ್

ಶಿವಮೊಗ್ಗ: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಎನ್.ಎಫ್.ಎಸ್.ಎ. ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಜೂನ್-2022ರ ಮಾಹೆಗೆ ಬಿಡುಗಡೆಯಾದ ಪಡಿತರಧಾನ್ಯವನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಿ ಬಿಡುಗಡೆ ಮಾಡಿದೆ.

ಅಂತ್ಯೋದಯ ಪಡಿತರ ಚೀಟಿದಾರರ ಕುಟುಂಬಕ್ಕೆ ಎನ್‍ಎಫ್‍ಎಸ್‍ಎ ಯೋಜನೆಯಡಿ ಪ್ರತಿ ಕುಟುಂಬಕ್ಕೆ 35 ಕೆ.ಜಿ. ಅಕ್ಕಿ ಹಾಗೂ ಕುಟುಂಬದ ಪ್ರತಿ ಸದಸ್ಯರಿಗೆ ಪಿಎಂಜಿಕೆಎವೈ ಯೋಜನೆಯಡಿ 5 ಕೆ.ಜಿ. ಅಕ್ಕಿ ಹಂಚಿಕೆ ನೀಡಲಾಗಿದೆ.  ಆದ್ಯತಾ ಕುಟುಂಬ (ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ ಎನ್‍ಎಫ್‍ಎಸ್‍ಎ ಹಂಚಿಕೆ 5 ಕೆ.ಜಿ.ಅಕ್ಕಿ ಮತ್ತು ಪಿಎಂಜಿಕೆಎವೈ ಯೋಜನೆಯಡಿ ಕುಟುಂಬದ ಪ್ರತಿ ಸದಸ್ಯರಿಗೆ 5 ಕೆ.ಜಿ.ಅಕ್ಕಿ ಉಚಿತವಾಗಿ ನೀಡಲಾಗುವುದು. ಆದ್ಯತೇತರ (ಎಪಿಎಲ್) ಪಡಿತರ ಚೀಟಿದಾರರಿಗೆ ಏಕ ಸದಸ್ಯರಿಗೆ ರೂ. 15/- ದರದಲ್ಲಿ ಏಕ ಸದಸ್ಯರಿಗೆ 5 ಕೆ.ಜಿ., 2 ಮತ್ತು ಹೆಚ್ಚಿನ ಸದಸ್ಯರಿರುವ ಪಡಿತರ ಚೀಟಿಗೆ 10 ಕೆ.ಜಿ. ಅಕ್ಕಿಯನ್ನು ವಿತರಿಸಲಾಗುವುದು.

ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರತಿ ಮಾಹೆಯ 1ನೇ ತಾರೀಖಿನಿಂದ ಬೆಳಗ್ಗೆ 7 ರಿಂದ ರಾತ್ರಿ 9 ಗಂಟೆವರೆಗೆ ಊಟದ ಸಮಯ ಹೊರತುಪಡಿಸಿ ತಿಂಗಳ ಅಂತ್ಯದವರೆಗೆ ಪಡಿತರ ವಿತರಿಸಲಾಗುವುದು. ಪಡಿತರ ಚೀಟಿದಾರರು ಆಧಾರ್ ಆಧಾರಿತ ಬಯೋ ಮೆಟ್ರಿಕ್ ಅಥವಾ ಓಟಿಪಿ ನೀಡಿ ಪಡಿತರ ಪಡೆಯುವುದು. ಅಂತ್ಯೋದಯ/ಬಿಪಿಎಲ್ ಪಡಿತರ ಚೀಟಿಗಳಿಗೆ ಆಹಾರ ಧಾನ್ಯ ಸಂಪೂರ್ಣ ಉಚಿತವಾಗಿದ್ದು, ಬಯೋ ಪಡೆಯಲು ಯಾವುದೇ ಶುಲ್ಕ ಇರುವುದಿಲ್ಲ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...