ಬೆಂಗಳೂರು: ಆಹಾರ ಧಾನ್ಯದಲ್ಲಿ ಕಡಿತ ಮಾಡುವುದಿಲ್ಲ ಎಂದು ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಗರೀಬ್ ಕಲ್ಯಾಣ್ ಯೋಜನೆಯನ್ನು ನಾಲ್ಕು ತಿಂಗಳ ಕಾಲ ವಿಸ್ತರಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೀಡುತ್ತಿರುವ ಆಹಾರ ಧಾನ್ಯದಲ್ಲಿ ಯಾವ ರೀತಿಯ ಕಡಿತ ಮಾಡುವುದಿಲ್ಲವೆಂದು ಸಚಿವರು ತಿಳಿಸಿದ್ದಾರೆ.
ಬಡ, ಮಧ್ಯಮ ವರ್ಗದ ಕುಟುಂಬಗಳಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ನಾಲ್ಕು ತಿಂಗಳು ಗರೀಬ್ ಕಲ್ಯಾಣ್ ಯೋಜನೆಯನ್ನು ವಿಸ್ತರಣೆ ಮಾಡಿದೆ. ಈ ಯೋಜನೆಗೆ ರಾಜ್ಯ ಸರ್ಕಾರವು ಕೈಜೋಡಿಸಿದ್ದು ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ನೀಡಲಾಗುತ್ತದೆ. 2020 ರ ಮಾರ್ಚ್ ನಲ್ಲಿ ಕೊರೋನಾದಿಂದ ಸಂಕಷ್ಟದಲ್ಲಿದ್ದ ಜನರಿಗೆ ಉಚಿತವಾಗಿ ಆಹಾರಧಾನ್ಯ ಒದಗಿಸಲು ಯೋಜನೆ ಜಾರಿಗೆ ತರಲಾಗಿದೆ.