ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕೊರೋನಾ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ.
ಪ್ರತಿ ಕುಟುಂಬಕ್ಕೆ 10 ಕೆಜಿ ಉಚಿತವಾಗಿ ನೀಡಲಾಗುವುದು. ರೇಷನ್ ಕಾರ್ಡ್ ಇಲ್ಲದವರಿಗೂ ಉಚಿತ ಅಕ್ಕಿ ವಿತರಿಸಲಾಗುತ್ತದೆ. ಕೋವಿಡ್ ನಿಂದ ಮೃತಪಟ್ಟವರ ಕುಟುಂಬಕ್ಕೆ 50,000 ರೂ. ಪರಿಹಾರ ನೀಡಲಾಗುವುದು. ಮೃತರ ಕುಟುಂಬದ ಮಕ್ಕಳಿಗೆ ತಿಂಗಳಿಗೆ 2500 ರೂಪಾಯಿ ಪಿಂಚಣಿ ನೀಡಲಾಗುತ್ತದೆ. ತಂದೆ, ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ 25 ವರ್ಷದವರೆಗೆ ಪಿಂಚಣಿ ಸೌಲಭ್ಯ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ದೆಹಲಿಯಲ್ಲಿ 72 ಲಕ್ಷ ಪಡಿತರ ಚೀಟಿ ಹೊಂದಿರುವವರು ಇದ್ದು ಅವರಿಗೆ ಪ್ರತಿ ತಿಂಗಳು 5 ಕೆಜಿ ಪಡಿತರವನ್ನು ಸರ್ಕಾರದಿಂದ ನೀಡಲಾಗುತ್ತದೆ. ಈ ತಿಂಗಳು ಪಡಿತರವನ್ನು ಉಚಿತವಾಗಿ ನೀಡಲಾಗುವುದು. ಇದಲ್ಲದೆ, ಕೇಂದ್ರದಿಂದ 5 ಕೆಜಿ ಉಚಿತ ಅಕ್ಕಿ ನೀಡುತ್ತಿದೆ. ಈ ತಿಂಗಳು 10 ಕೆಜಿ ಉಚಿತ ಪಡಿತರ ಸಿಗಲಿದೆ ಎಂದು ಹೇಳಿದ್ದಾರೆ.
ಪಡಿತರ ಚೀಟಿ ಇಲ್ಲದಿದ್ದರೂ ಬಡವರಾಗಿರುವವರಿಗೆ ದೆಹಲಿ ಸರ್ಕಾರದಿಂದ ಪಡಿತರ ನೀಡಲಾಗುವುದು. ಅವರು ತಮ್ಮ ಆದಾಯ ಪ್ರಮಾಣಪತ್ರವನ್ನು ತೋರಿಸುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.