
ಬೆಂಗಳೂರು: ರಾಜ್ಯದಲ್ಲಿ ಪಡಿತರ ಚೀಟಿದಾರರ ಮನೆಬಾಗಿಲಿಗೆ ಪಡಿತರ ಪೂರೈಸುವಂತೆ ಆಡಳಿತ ಸುಧಾರಣೆ ಆಯೋಗ -2 ಮೊದಲ ವರದಿಯಲ್ಲಿ ಶಿಫಾರಸು ಮಾಡಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಸಾರಿಗೆ ಇಲಾಖೆ, ಕಂದಾಯ ಇಲಾಖೆಗೆ ಸಂಬಂಧಿಸಿದಂತಹ ಶಿಫಾರಸ್ಸುಗಳನ್ನು ಟಿ.ಎಂ. ವಿಜಯಭಾಸ್ಕರ್ ನೇತೃತ್ವದ ಆಯೋಗ ಸರ್ಕಾರಕ್ಕೆ ಸಲ್ಲಿಸಿದೆ.
ಮನೆಬಾಗಿಲಿಗೆ ಪಡಿತರ ಪೂರೈಸಲು ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಎಲ್ಲಾ ಆರ್.ಟಿ.ಒ. ಸೇವೆಗಳನ್ನು ಕಾಗದರಹಿತವಾಗಿ ಮಾಡಲು ಸಲಹೆ ನೀಡಲಾಗಿದೆ. ಕಂದಾಯ ಇಲಾಖೆಗೆ ಸಂಬಂಧಿಸಿದ ಹಲವು ಸಲಹೆ ಜಾರಿ ಬಗ್ಗೆ ಶಿಫಾರಸು ಮಾಡಲಾಗಿದೆ ಎಂದು ಹೇಳಲಾಗಿದೆ.