ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರ ಮನೆಬಾಗಿಲಿಗೆ ಪಡಿತರ ಪೂರೈಕೆ ಸೇರಿದಂತೆ ಹಲವು ಇಲಾಖೆಗಳ ಸುಧಾರಣೆಗೆ ಸಂಬಂಧಿಸಿದ ವಿಸ್ತೃತ ವರದಿಯನ್ನು ಕರ್ನಾಟಕ ಆಡಳಿತ ಸುಧಾರಣಾ ಆಯೋಗದಿಂದ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದೆ.
ರೇಷನ್ ಅಂಗಡಿ, ಜನರು ಚರ್ಚಿಸಿ ಶುಲ್ಕ ನಿಗದಿಪಡಿಸಿ ಮನೆಬಾಗಿಲಿಗೆ ಪಡಿತರ ಪೂರೈಕೆ ಮಾಡಬೇಕು ಎಂದು ನಿವೃತ್ತ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಸಮಿತಿಯಿಂದ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.
ಮನೆ ಬಾಗಿಲಿಗೆ ಪಡಿತರ ಪೂರೈಕೆಗೆ ಅನುಮತಿ ನೀಡಬೇಕು. ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯನ್ನು ಪಡಿತರ ಚೀಟಿ ಡೇಟಾಬೇಸ್ ನೊಂದಿಗೆ ಸಂಯೋಜನೆ ಮಾಡಬೇಕು. 800 ಆನ್ಲೈನ್ ಸೇವೆಗಳಿಗೆ ಏಕಗವಾಕ್ಷಿ ಏಜೆನ್ಸಿ ರಚಿಸಬೇಕು. ಬೆಂಗಳೂರು ಒನ್ ಕರ್ನಾಟಕವನ್ನು ಗ್ರಾಪಂ ಸೇವಾ ಕೇಂದ್ರಗಳ ಮೂಲಕ ಸೇವೆಗಳು ಲಭ್ಯವಿರಬೇಕು. ಆರ್.ಟಿ.ಒ. ಕಚೇರಿ ಪೇಪರ್ ಲೆಸ್ ಆಗಬೇಕೆಂಬು ಹೇಳಲಾಗಿದೆ.
ಹೀಗೆ ಕಂದಾಯ, ಆಹಾರ ಮತ್ತು ಸಾರಿಗೆ ಇಲಾಖೆಯ ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಆಯೋಗದಿಂದ ಮೊದಲ ವರದಿಯನ್ನು ಸಿಎಂಗೆ ಸಲ್ಲಿಸಲಾಗಿದೆ.