alex Certify ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಖಾತೆಗೆ ಹಣ; ಉಚಿತ ಅಕ್ಕಿ, ರಾಗಿ ಸೇರಿ ಪಡಿತರ ಧಾನ್ಯ ಹಂಚಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಖಾತೆಗೆ ಹಣ; ಉಚಿತ ಅಕ್ಕಿ, ರಾಗಿ ಸೇರಿ ಪಡಿತರ ಧಾನ್ಯ ಹಂಚಿಕೆ

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜನವರಿ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 21 ಕೆಜಿ ಅಕ್ಕಿ ಮತ್ತು 14 ಕೆಜಿ ರಾಗಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆಜಿ ಗೆ 15 ರೂ.ನಂತೆ ಒಪ್ಪಿಗೆ ನೀಡಿದ ಎಪಿಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆಜಿ ಅಕ್ಕಿಯನ್ನು ವಿತರಿಸಲಾಗುವುದು.

ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...