alex Certify ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್

ರಾಯಚೂರು: ಅಂತ್ಯೋದಯ ಮತ್ತು ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಮಾರ್ಚ್ ಮಾಹೆಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಮತ್ತು ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಪಡಿತರ ಚೀಟಿಯಲ್ಲಿನ ಪ್ರತಿ ಸದ್ಯಸರಿಗೆ 5 ಕೆ.ಜಿ ಅಕ್ಕಿ ಹಾಗೂ ಪ್ರತಿ ಬಿಪಿಎಲ್ ಪಡಿತರ ಚೀಟಿಗೆ 2ಕೆ.ಜಿ ಗೋಧಿ ಉಚಿತವಾಗಿ ವಿತರಿಸಲಾಗುತ್ತದೆ.

ಒಪ್ಪಿಗೆ ಅಥವಾ ಸಮ್ಮತಿ ಸೂಚಿಸಿರುವ ಎಪಿಎಲ್ ಪಡಿತರ ಚೀಟಿದಾರರಿಗೆ ರಿಯಾಯಿತಿ ದರದಲ್ಲಿ ಪ್ರತಿ ಕೆ.ಜಿಗೆ 15 ರೂ. ರಂತೆ ಏಕ ಸದಸ್ಯರ ಪಡಿತರ ಚೀಟಿಗೆ 5 ಕೆ.ಜಿ ಅಕ್ಕಿ ಹಾಗೂ ಎರಡು ಮತ್ತು ಹೆಚ್ಚಿನ ಕುಟುಂಬ ಸದಸ್ಯರಿರುವ ಎ.ಪಿ.ಎಲ್ ಪಡಿತರ ಚೀಟಿಗೆ 10ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.

ಅಂತರ್ ರಾಜ್ಯ ಅಥವಾ ಅಂತರ್ ಜಿಲ್ಲೆ ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಯಾವುದೇ ನ್ಯಾಯಬೆಲೆ ಅಂಗಡಿಕಾರರು ಕಡಿಮೆ ಪ್ರಮಾಣದ ಪಡಿತರವನ್ನು ವಿತರಣೆ ಮಾಡಿದ್ದಲ್ಲಿ, ಹಣ ಕೇಳಿದ್ದಲ್ಲಿ ಮತ್ತು ಇತರೆ ದೂರುಗಳಿಗೆ ಸಹಾಯವಾಣಿ ಸಂಖ್ಯೆ 1967ಗೆ ಹಾಗೂ ತಾಲ್ಲೂಕಿನಲ್ಲಿರುವ ತಹಶೀಲ್ದಾರ್ ಕಚೇರಿಗೆ ದೂರನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಅವಿನಾಶ್ ರಾಜೇಂದ್ರ ಮೆನನ್ ಅವರು ತಿಳಿಸಿದ್ದಾರೆ.

ಇ-ಕೆವೈಸಿ ಕಡ್ಡಾಯ

ಜಿಲ್ಲೆಯಲ್ಲಿ ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳಲ್ಲಿನ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಮಾ.20 ರವರೆಗೆ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸಲು ತಿಳಿಸಲಾಗಿದೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದಕ್ಕೆ ಪಡಿತರ ಚೀಟಿಯಲ್ಲಿನ ಸದಸ್ಯರು. ಯಾವುದೇ ಹಣ ನೀಡುವಂತಿಲ್ಲ. ಯಾವುದಾದರೂ ದೂರುಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ: 1967 ಗೆ ಸಂಪರ್ಕಿಸುವAತೆ ಕೋರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...