alex Certify ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಸಾರವರ್ಧಿತ ಅಕ್ಕಿ ವಿತರಣೆ; ಪ್ಲಾಸ್ಟಿಕ್ ಅಕ್ಕಿ ಎಂದು ಆತಂಕಕ್ಕೆ ಒಳಗಾಗದೇ ಉಪಯೋಗಿಸಿ, ಅಕ್ಕಿ ಮಾರಿದ್ರೆ ರೇಷನ್ ಕಾರ್ಡ್ ರದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಸಾರವರ್ಧಿತ ಅಕ್ಕಿ ವಿತರಣೆ; ಪ್ಲಾಸ್ಟಿಕ್ ಅಕ್ಕಿ ಎಂದು ಆತಂಕಕ್ಕೆ ಒಳಗಾಗದೇ ಉಪಯೋಗಿಸಿ, ಅಕ್ಕಿ ಮಾರಿದ್ರೆ ರೇಷನ್ ಕಾರ್ಡ್ ರದ್ದು

ಹೊಸಪೇಟೆ(ವಿಜಯನಗರ): ಸಾರವರ್ಧಿತ ಅಕ್ಕಿ ಉಪಯೋಗಿಸಿ ಆರೋಗ್ಯವಂತರಾಗಿ ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ದಿನನಿತ್ಯದ ಆಹಾರದಲ್ಲಿ ಸಂಪೂರ್ಣ ಪೋಷಕಾಂಶಗಳು ಲಭ್ಯವಾಗದೇ ಇರುವ ಕಾರಣದಿಂದಾಗಿ ಅನೀಮಿಯ, ಇರುಳುಗುರುಡುತನದಂತಹ ರೋಗಗಳು ಬರಬಹುದಾಗಿದೆ. ಅಲ್ಲದೇ ಹೆಚ್ಚಾಗಿ ಮಹಿಳೆಯರು ಹಾಗೂ ಮಕ್ಕಳು ಅಪೌಷ್ಪಿಕತೆಗೆ ಬಲಿಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇದನ್ನು ತಪ್ಪಿಸಲು ಹೆಚ್ಚಿನ ಪೋಷಕಾಂಶದ ಅಗತ್ಯತೆ ಇರುತ್ತದೆ.

ಈ ನಿಟ್ಟಿನಲ್ಲಿ ಜನಸಾಮಾನ್ಯರಲ್ಲಿನ ಅಪೌಷ್ಟಿಕತೆ ಹೋಗಲಾಡಿಸಿ ಆರೋಗ್ಯ ವೃದ್ಧಿಸುವ ಉದ್ದೇಶದಿಂದ ಸಾರ್ವಜನಿಕ ವಿತರಣಾ ಪದ್ಧತಿಯ ಅನ್ನಭಾಗ್ಯ ಯೋಜನೆಯಡಿ ವಿತರಣೆ ಮಾಡಲಾಗುವ ಪ್ರತಿ 50 ಕೆ.ಜಿಯ ಅಕ್ಕಿಯ ಚೀಲದಲ್ಲಿ ಅರ್ಧ ಕೆ.ಜಿ ಯಷ್ಟು ಪೋಷಕಾಂಶ (ವಿಟಾಮಿನ್ ಎ ಮತ್ತು ಡಿ. ಐರನ್, ಫೋಲಿಕ್ ಆಸಿಡ್, ಬಿಕಾಂಪ್ಲೇಕ್ಸ್, ಜಿಂಕ್ ಹಾಗೂ ಐಯೋಡಿನ್) ಭರಿತ ಸಾರವರ್ದಿತ ಅಕ್ಕಿಯಲ್ಲಿ ಬೆರೆಸಿ 2022 ನೇ ಮೇ ತಿಂಗಳಿನಿಂದ ನ್ಯಾಯಬೆಲೆ ಅಂಗಡಿಯಲ್ಲಿ ವಿತರಣೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸಾರವರ್ಧಿತಗೊಳಿಸಿರುವ(ಪೋರ್ಟಿಫೈಡ್)ಅಕ್ಕಿಯಲ್ಲಿ ಕೆಲವೊಂದು ಅಕ್ಕಿಯ ಕಾಳುಗಳು ಹೊಳಪಿನಿಂದ ನೋಡಲು ಪ್ಲಾಸ್ಟಿಕ್ ರೀತಿಯಲ್ಲಿ ಕಾಣಿಸುತ್ತಿದ್ದು, ಸಾರ್ವಜನಿಕರು ಆತಂಕಕ್ಕೊಳಗಾಗದೇ ವಿತರಣೆ ಮಾಡಲಾಗುತ್ತಿರುವ ಸಾರವರ್ಧಿತ ಅಕ್ಕಿಯನ್ನು ಉಪಯೋಗಿಸಿ ಆರೋಗ್ಯವಂತರಾಗಲು ಅವರು ಕೋರಿದ್ದಾರೆ.

ಸಾರ್ವಜನಿಕ ವಿತರಣಾ ಪದ್ಧತಿಯಡಿ ಬಿಡುಗಡೆ ಮಾಡುವ ಅಕ್ಕಿಯನ್ನು ಸ್ವಂತಕ್ಕೆ ಉಪಯೋಗಿಸತಕ್ಕದ್ದು, ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಅಂತಹ ಕುಟುಂಬಕ್ಕೆ ನೀಡಿದ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಪಡಿಸಲಾಗುವುದೆಂದು ಅವರು ಎಚ್ಚರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...