ಧಾರವಾಡ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಆಹಾರ ಧಾನ್ಯ ವಿತರಿಸಲಾಗುತ್ತಿದೆ.
ಅಂತ್ಯೋದಯ ಪಡಿತರ ಚೀಟಿದಾರರಿಗೆ 20 ಕೆಜಿ ಅಕ್ಕಿ, 15 ಕೆಜಿ ಜೋಳ, ಬಿಪಿಎಲ್ ಕಾರ್ಡಿನ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 3 ಕೆಜಿ ಅಕ್ಕಿ ಹಾಗೂ 2 ಕೆಜಿ ಜೋಳ ಉಚಿತವಾಗಿ ವಿತರಿಸಲಾಗುತ್ತದೆ. ಕಳೆದ ಏಪ್ರಿಲ್ ನಿಂದ ಗೋಧಿ ಹಂಚಿಕೆ ಸ್ಥಗಿತಗೊಳಿಸಲಾಗಿದೆ. ಕೆಲವೆಡೆ ಗೋಧಿ ದಾಸ್ತಾನು ಉಳಿದಿದ್ದು, ಆದ್ಯತೆಯ ಮೇಲೆ ಮೊದಲು ಬಂದ ಕಾರ್ಡುದಾರರಿಗೆ ಪ್ರತಿ ಕಾರ್ಡಿಗೆ 2 ಕೆಜಿ ಗೋಧಿ ವಿತರಿಸಲಾಗುವುದು.
ಗ್ರಾಹಕರು ಹಂಚಿಕೆಯಾಗಿರುವ ಪಡಿತರವನ್ನು ನಿಗದಿತ ಸರಿಯಾದ ಪ್ರಮಾಣದಲ್ಲಿ ಪಡೆಯಬೇಕು. ನ್ಯಾಯಬೆಲೆ ಅಂಗಡಿಕಾರರು ಕಡಿಮೆ ಪ್ರಮಾಣದ ಆಹಾರ ಧಾನ್ಯ ನೀಡಿದರೆ ಜಿಲ್ಲಾಧಿಕಾರಿಗಳ ಕಚೇರಿಯ ಆಹಾರ ಶಾಖೆ ದೂರವಾಣಿ ಸಂಖ್ಯೆ 0836-2444594 ಗೆ ಮಾಹಿತಿ ನೀಡಿದರೆ ನಿಯಮಾನುಸಾರ ಕ್ರಮವಹಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.