ಬೆಂಗಳೂರು: ಅನ್ನ ಭಾಗ್ಯ ಯೋಜನೆ ಅಡಿ ಬಿಪಿಎಲ್ ಕುಟುಂಬ ಸದಸ್ಯರಿಗೆ ವಿತರಿಸುತ್ತಿರುವ ಅಕ್ಕಿ ಪ್ರಮಾಣವನ್ನು ಹೆಚ್ಚಳ ಮಾಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದಿಂದ ಅಭಿನಂದನೆ ಸಲ್ಲಿಸಲಾಗಿದೆ.
ಅಕ್ಕಿ ಪ್ರಮಾಣವನ್ನು 5 ಕೆಜಿಯಿಂದ 10 ಕೆಜಿಗೆ ಹೆಚ್ಚಿಸಿರುವುದರಿಂದ ಕೋಟ್ಯಂತರ ಫಲಾನುಭವಿಗಳಿಗೆ ಅನುಕೂಲವಾಗಿದೆ. ಅಕ್ಕಿ ಜತೆಗೆ ಸಕ್ಕರೆ, ಉಪ್ಪು, ಸೀಮೆಎಣ್ಣೆ ನೀಡಬೇಕು ಎಂದು ಸಂಘದಿಂದ ಸಿಎಂಗೆ ಮನವಿ ಮಾಡಲಾಗಿದೆ.
ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಪ್ರತಿ ಬಿಪಿಎಲ್ ಕುಟುಂಬಗಳಿಗೆ ವಿತರಿಸುತ್ತಿದ್ದ ಅಕ್ಕಿ ಪ್ರಮಾಣ ಹೆಚ್ಚಿಸಿದ್ದರು. ದೈನಂದಿನ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಿದ್ದರು. ಹಿಂದಿನ ವ್ಯವಸ್ಥೆ ರೀತಿಯಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ದಿನಬಳಕೆ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಬೇಕೆಂದು ರಾಜ್ಯ ಪಡಿತರ ವಿತರಕರ ಸಂಘದ ಅಧ್ಯಕ್ಷ ಟಿ. ಕೃಷ್ಣಪ್ಪ ಮನವಿ ಮಾಡಿದ್ದಾರೆ.
ಮರ್ಪಕವಾಗಿ ರೇಷನ್ ವಿತರಿಸಿ ರಾಜ್ಯ ಸರ್ಕಾರಕ್ಕೆ ಒಳ್ಳೆಯ ಹೆಸರು ತರಲಾಗುವುದು. ಎಂ.ಆರ್.ಪಿ. ದರದಂತೆ ನಿತ್ಯ ಬಳಕೆ ವಸ್ತುಗಳನ್ನು ಮಾರಾಟ ಮಾಡಲಾಗುವುದು ಎಂದು ಹೇಳಿದ್ದಾರೆ.