ಯಾದಗಿರಿ: ಯಾದಗಿರಿ ಜಿಲ್ಲೆಯಲ್ಲಿ ಪಡಿತರ ಅಕ್ಕಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿಜೆಪಿ ಮುಖಂಡ ಮಣಿಕಂಠ ರಠೋಡ್ ಸಹೋದರನ ರೈಸ್ ಮಿಲ್ ನಿಂದ 700 ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆಯಲಾಗಿದೆ.
ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್ ಗೆ ಸೇರಿದ ಲಕ್ಷ್ಮೀ ವೆಂಕಟೇಶ್ವರ ರೈಸ್ ಮಿಲ್ ನಿಂದ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಸುರಪುರ ಡಿವೈ ಎಸ್ ಪಿ ಜಾವೇದ್ ಇನಾಮ್ದಾರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.
ದಾಳಿ ವೇಳೆ ಪಾಲಿಶ್ ಮಾಡಿದ್ದ 630 ಕ್ವಿಂಟಾಲ್ ಪಡಿತರ ಅಕ್ಕಿ ಸೇರಿ ಒಟ್ಟು 700 ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆಯಲಾಗಿದೆ.
ಪಡಿತರ ಅಕ್ಕಿ ಕಳ್ಳತನದಲ್ಲಿ ಬಂಧಿತರಾಗಿದ್ದ ಆರೋಪಿಗಳು ತಾವು ಕದ್ದ ಅಕ್ಕಿಅನ್ನು ರಾಜು ರಾಠೋಡ್ ಗೆ ಮಾರಿದ್ದಾಗಿ ಬಾಯ್ಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.