
ಬೆಳಗಾವಿ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬದ ಪ್ರತಿ ಸದಸ್ಯರಿಗೆ ಉಚಿತವಾಗಿ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಅವರಾದಿ ಗ್ರಾಮದಲ್ಲಿ ಮಾಜಿ ಶಾಸಕ ದಿ.ಡಾ. ಮಹದೇವಪ್ಪ ಪಟ್ಟಣ ಮತ್ತು ದಿ. ಶಾರದಮ್ಮ ಪಟ್ಟಣ ಅವರ ಸ್ಮರಣಾರ್ಥ ನಿರ್ಮಿಸಿದ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು. ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿದ ಭಾಗ್ಯ ಯೋಜನೆಗಳನ್ನು ಪುನಃ ಜಾರಿಗೆ ತರಲಾಗುತ್ತದೆ ಎಂದು ತಿಳಿಸಿದ್ದಾರೆ.