ಬೆಂಗಳೂರು: ಪಡಿತರದ ಜೊತೆಗೆ ಸೋಪು, ಎಣ್ಣೆ, ಉಪ್ಪು ಕೂಡ ಮಾರಾಟಕ್ಕೆ ಅವಕಾಶ ನೀಡಲು ಸರ್ಕಾರ ಚಿಂತನೆ ನಡೆಸಿದೆ.
ಮುಂದಿನ ಬಜೆಟ್ನಲ್ಲಿ ಈ ನಿರ್ಧಾರ ಪ್ರಕಟಿಸಲು ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ.
ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಅವರು ಮಾತನಾಡಿ, ಗ್ರಾಹಕರಿಗೆ ಪಡಿತರದ ಜೊತೆಗೆ ಮೈಸೂರು ಸ್ಯಾಂಡಲ್ ಸೋಪು, ಅಡುಗೆ ಎಣ್ಣೆ ಮತ್ತು ಉಪ್ಪು ಮಾರಾಟಕ್ಕೆ ಪಡಿತರ ವಿತರಕರಿಗೆ ಅವಕಾಶ ಕಲ್ಪಿಸಲು ಬಜೆಟ್ ನಲ್ಲಿ ಸೇರಿಸುವಂತೆ ಸಿಎಂಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.