alex Certify ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಏ. 1 ರಿಂದ ರಾಗಿ, ಜೋಳ, ತೊಗರಿ, ಹೆಸರುಕಾಳು ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಏ. 1 ರಿಂದ ರಾಗಿ, ಜೋಳ, ತೊಗರಿ, ಹೆಸರುಕಾಳು ವಿತರಣೆ

ಕಲಬುರಗಿ: ಈ ಭಾಗದಲ್ಲಿ ಹೆಚ್ಚಾಗಿ ಬೆಳೆಯುತ್ತಿರುವ ಜೋಳ, ತೊಗರಿ ಹಾಗೂ ಹೆಸರು ಕಾಳುಗಳನ್ನು ಖರೀದಿಸಿ ನ್ಯಾಯಬೆಲೆ ಅಂಗಡಿ ಮೂಲಕ ವಿತರಿಸಲು ಕ್ರಮಕೈಗೊಳ್ಳುವುದಾಗಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ವಿ. ಕತ್ತಿ ಅವರು ಭರವಸೆ ನೀಡಿದ್ದಾರೆ.

ಕಲಬುರಗಿ ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ 72ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು.

ಹಾಗೆಯೇ ದಕ್ಷಿಣ ಕರ್ನಾಟಕದ ಪ್ರಮುಖ ಆಹಾರ ಬೆಳೆಯಾಗಿರುವ ರಾಗಿ ಧಾನ್ಯವನ್ನೂ ಪಡಿತರಕ್ಕೆ ಸೇರ್ಪಡೆ ಮಾಡಲಿದ್ದು, ಏಪ್ರಿಲ್ 1 ರಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಈ ಆಹಾರ ಧಾನ್ಯಗಳ ವಿತರಣೆ ಮಾಡಲು ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...