ನವದೆಹಲಿ: ಕಳೆದ ಬಾರಿ ಕೊರೋನಾ ಲಾಕ್ ಡೌನ್ ಸಂಕಷ್ಟದ ಸಂದರ್ಭದಲ್ಲಿ 8 ತಿಂಗಳ ಕಾಲ ದೇಶದ ಜನರಿಗೆ ಉಚಿತವಾಗಿ ಆಹಾರಧಾನ್ಯ ವ್ಯವಸ್ಥೆ ಮಾಡಲಾಗಿತ್ತು. ಅದೇ ರೀತಿ ಈ ವರ್ಷವೂ ಮೇ ಮತ್ತು ಜೂನ್ ತಿಂಗಳಲ್ಲಿ ಉಚಿತವಾಗಿ ಆಹಾರಧಾನ್ಯ ನೀಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಮತ್ತೆ ವಿಸ್ತರಿಸಲಾಗಿದ್ದು, ದೇಶದ 80 ಕೋಟಿ ಜನರಿಗೆ ನವಂಬರ್ ವರೆಗೂ ಉಚಿತವಾಗಿ ಆಹಾರಧಾನ್ಯ ವಿತರಿಸಲಾಗುವುದು ಎಂದು ಭಾಷಣದಲ್ಲಿ ಪ್ರಧಾನಿ ಮೋದಿ ತಿಳಿಸಿದ್ದಾರೆ.
ಯಾವ ನಾಗರಿಕರು ಹಸಿವಿನಿಂದ ಬಳಲಬಾರದು. ಬಡವರು ಹಸಿವಿನಿಂದ ಮಲಗಬಾರದು. ಹಾಗಾಗಿ, ನವೆಂಬರ್ ವರೆಗೂ ಅಂದರೆ ದೀಪಾವಳಿವರೆಗೆ ಉಚಿತವಾಗಿ ಆಹಾರ ಧಾನ್ಯ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.