ನವದೆಹಲಿ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು ಮತ್ತೆ ವಿಸ್ತರಿಸಲಾಗಿದ್ದು, ದೇಶದ 80 ಕೋಟಿ ಜನರಿಗೆ ನವಂಬರ್ ವರೆಗೂ ಉಚಿತವಾಗಿ ಆಹಾರಧಾನ್ಯ ವಿತರಿಸಲಾಗುವುದು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ದೇಶದ ಜನರನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಬಡವರಿಗೆ ಅನುಕೂಲವಾಗುವಂತೆ ನವೆಂಬರ್ ವರೆಗೆ ಉಚಿತವಾಗಿ ರೇಷನ್ ನೀಡಲಾಗುವುದು ಎಂದರು.
ಕೇಂದ್ರ ಸರ್ಕಾರವೇ ರಾಜ್ಯಗಳಿಗೆ ಲಸಿಕೆ ಪೂರೈಕೆ ಮಾಡಲಿದೆ. ರಾಜ್ಯ ಸರ್ಕಾರಗಳ ಲಸಿಕೆ ಬೇಡಿಕೆಯನ್ನು ಕೇಂದ್ರ ಸರ್ಕಾರ ಈಡೇರಿಸಲಿದೆ. ಲಸಿಕೆಯನ್ನು ಮುಂದಿನ ಎರಡು ವಾರದ ನಂತರ ರಾಜ್ಯಗಳಿಗೆ ಉಚಿತವಾಗಿ ಕೇಂದ್ರ ಸರ್ಕಾರವೇ ನೀಡಲಿದೆ ಎಂದು ಹೇಳಿದ್ದಾರೆ.
ಲಸಿಕೆಯನ್ನು ಉಚಿತವಾಗಿ ದೇಶದ ಎಲ್ಲ ಜನತೆಗೂ ನೀಡಲಾಗುವುದು. ಕೇಂದ್ರ ಸರ್ಕಾರದಿಂದ ಉಚಿತವಾಗಿ ಲಸಿಕೆ ನೀಡಲಾಗುವುದು. ಶೇಕಡ 25 ರಷ್ಟು ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳು ಖರೀದಿ ಮಾಡಬಹುದು. ಖಾಸಗಿ ಆಸ್ಪತ್ರೆಗಳಲ್ಲಿ 150 ರೂಪಾಯಿ ಮಾತ್ರ ಸೇವಾ ಶುಲ್ಕ ಪಡೆಯಬಹುದು. ಇನ್ನು ಮುಂದೆ ಕೇಂದ್ರ ಸರ್ಕಾರವೇ ರಾಜ್ಯಗಳಿಗೆ ಲಸಿಕೆ ನೀಡಲಿದೆ. ದೇಶದ ಎಲ್ಲ ಜನತೆಗೆ ಕೇಂದ್ರದಿಂದ ಉಚಿತವಾಗಿ ಲಸಿಕೆ ಕೊಡಲಾಗುತ್ತದೆ. ಶೇಕಡ 75 ರಷ್ಟು ಲಸಿಕೆಯನ್ನು ಕೇಂದ್ರ ಸರ್ಕಾರ ಖರೀದಿಸಲಿದೆ. ಮೇ ಮೊದಲು ಇದ್ದ ವ್ಯವಸ್ಥೆ ಜಾರಿಯಾಗಲಿದೆ. ಕೇಂದ್ರ ಸರ್ಕಾರವೇ ಲಸಿಕೆ ಖರೀದಿ ಮಾಡಿ ರಾಜ್ಯಗಳಿಗೆ ನೀಡಲಿದೆ ಎಂದು ತಿಳಿಸಿದ್ದಾರೆ.