ಬೆಂಗಳೂರು: ಪಡಿತರ ಚೀಟಿದಾರರ ಮನೆಬಾಗಿಲಿಗೆ ಪಡಿತರ ಪೂರೈಕೆ ಮಾಡುವ ಯೋಜನೆಯನ್ನು ರಾಜ್ಯದಲ್ಲಿ ಆರಂಭಿಸಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಮುಂದಾಗಿದೆ.
ಆಂಧ್ರಪ್ರದೇಶದ ಮಾದರಿಯಲ್ಲಿ ರಾಜ್ಯದಲ್ಲಿಯೂ ಪಡಿತರ ಚೀಟಿದಾರರ ಮನೆಬಾಗಿಲಿಗೆ ಪಡಿತರ ಪೂರೈಕೆ ಮಾಡಲು ಯೋಜನೆ ರೂಪಿಸಲಾಗಿದ್ದು, ಆಹಾರ ಸಚಿವ ಉಮೇಶ ಕತ್ತಿ ಮಂಗಳವಾರ ಇಲಾಖೆಯ ಅಧಿಕಾರಿಗಳೊಂದಿಗೆ ಈ ಕುರಿತಂತೆ ಸಮಾಲೋಚನೆ ನಡೆಸಿದ್ದಾರೆ.
ಮನೆಬಾಗಿಲಿಗೆ ಪಡಿತರ ಪೂರೈಸುವ ಯೋಜನೆಯ ಪ್ರಾಯೋಗಿಕ ಅನುಷ್ಠಾನಕ್ಕೆ ಸಿದ್ಧತೆ ಕೈಗೊಳ್ಳಲು ಸಚಿವರು ಸೂಚನೆ ನೀಡಿದ್ದು, ನವೆಂಬರ್ 1 ರಂದು ಪ್ರಾಯೋಗಿಕ ಯೋಜನೆಗೆ ಚಾಲನೆ ಸಿಗುವ ಸಾಧ್ಯತೆ ಇದೆ.
ನವೆಂಬರ್ 1 ರಿಂದ ಪ್ರಾಯೋಗಿಕವಾಗಿ ಬೆಂಗಳೂರು ಮಹಾನಗರದಲ್ಲಿ ಯೋಜನೆಯನ್ನು ಜಾರಿಗೆ ತರಲಾಗುವುದು. ನಂತರ ಉಳಿದೆಡೆಯೂ ಆರಂಭಿಸುವ ಚಿಂತನೆ ಇದೆ. ಪಡಿತರ ಪೂರೈಕೆ ಮಾಡುವ ವಾಹನಕ್ಕೆ ಕೆಜಿಗೆ 1 ರೂ ಸಾಗಣೆ ವೆಚ್ಚ ನಿಗದಿಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.