ಇಂದೋರ್ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುವಿನ ಪಾದಗಳನ್ನು ಇಲಿಗಳು ತಿಂದಿವೆ. ಮಧ್ಯಪ್ರದೇಶ ಸರ್ಕಾರ ನಡೆಸುತ್ತಿರುವ ಇಂದೋರ್ ನ ಮಹಾರಾಜ ಯಶವಂತರಾವ್ ಆಸ್ಪತ್ರೆಯ ನರ್ಸರಿ ಆರೈಕೆ ಘಟಕದಲ್ಲಿ ಘಟನೆ ನಡೆದಿದೆ.
ಸೋಮವಾರ ಆಸ್ಪತ್ರೆಯ ನವಜಾತ ಶಿಶು ಆರೈಕೆ ಘಟಕದಲ್ಲಿ ಶಿಶುವಿನ ಕಾಲುಗಳನ್ನು ಇಲಿಗಳು ತಿಂದಿದ್ದು ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆಸ್ಪತ್ರೆಯ ಅಧೀಕ್ಷಕ ಡಾ. ಪ್ರಮೇಂದ್ರ ಠಾಕೂರ್ ಈ ಬಗ್ಗೆ ಮಾಹಿತಿ ನೀಡಿದ್ದು, ಇಲಿಗಳು ನವಜಾತ ಶಿಶುವಿನ ಕಾಲು ತಿಂದಿರುವುದು ಗಮನಕ್ಕೆ ಬಂದಿದೆ. ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನೆ ಗಮನಕ್ಕೆ ಬರುತ್ತಲೇ ಇಬ್ಬರು ವೈದ್ಯರು ಮತ್ತು ಆಡಳಿತ ಅಧಿಕಾರಿ ಒಳಗೊಂಡ ಮೂವರು ಸದಸ್ಯರ ಸಮಿತಿಯನ್ನು ತನಿಖೆಗೆ ರಚಿಸಿರುವುದಾಗಿ ಠಾಕೂರ್ ತಿಳಿಸಿದ್ದಾರೆ.