
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ ಡಿ. ಚೆನ್ನಣ್ಣನವರ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ.
ತಮಗೆ ಕೊರೊನಾ ಸೋಂಕು ತಗಲಿರುವ ಬಗ್ಗೆ ಮಾಹಿತಿ ನೀಡಿರುವ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್, ಕೊರೋನಾ ಪಾಸಿಟಿವ್ ಬಂದಿದೆ. ನಿಮ್ಮೆಲ್ಲರನ್ನು ರಕ್ಷಿಸಲು ನಾವು ರಿಸ್ಕ್ ತೆಗೆದುಕೊಳ್ಳುತ್ತಿದ್ದೇವೆ. ಮನೆಯಲ್ಲಿಯೇ ಇರಿ, ಸುರಕ್ಷಿತವಾಗಿರಿ ಎಂದು ತಿಳಿಸಿದ್ದಾರೆ. ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆನ್ನಲಾಗಿದೆ.
https://twitter.com/DCPraviIPS/status/1391694578172919817