alex Certify BREAKING: ರೋಹಿತ್, ವಿರಾಟ್ ಕೊಹ್ಲಿ ಬೆನ್ನಲ್ಲೇ ರವೀಂದ್ರ ಜಡೇಜ ನಿವೃತ್ತಿ: ಟಿ20 ಕ್ರಿಕೆಟ್ ಗೆ ವಿದಾಯ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರೋಹಿತ್, ವಿರಾಟ್ ಕೊಹ್ಲಿ ಬೆನ್ನಲ್ಲೇ ರವೀಂದ್ರ ಜಡೇಜ ನಿವೃತ್ತಿ: ಟಿ20 ಕ್ರಿಕೆಟ್ ಗೆ ವಿದಾಯ ಘೋಷಣೆ

ನವದೆಹಲಿ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಂತರ ಈಗ ರವೀಂದ್ರ ಜಡೇಜಾ ಕೂಡ ಟಿ20 ಗೆ ನಿವೃತ್ತಿ ಘೋಷಿಸಿದ್ದಾರೆ.

2024ರ ಟಿ20 ವಿಶ್ವಕಪ್‌ ಗೆದ್ದ ಬಳಿಕ ಭಾರತದ ಮತ್ತೋರ್ವ ಕ್ರಿಕೆಟಿಗ ರವೀಂದ್ರ ಜಡೇಜಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಅವರು Instagram ಪೋಸ್ಟ್‌ ನಲ್ಲಿ 4 ಸಾಲಿನ ಸಂದೇಶವನ್ನು ಬರೆದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.

ನಾನು ಕೃತಜ್ಞತೆಯ ಹೃದಯದಿಂದ T20 ಅಂತರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳುತ್ತೇನೆ. ದೃಢವಾದ ಕುದುರೆಯು ಹೆಮ್ಮೆಯಿಂದ ಓಡುತ್ತಿರುವಂತೆ, ನಾನು ಯಾವಾಗಲೂ ನನ್ನ ದೇಶಕ್ಕಾಗಿ ನನ್ನ ಅತ್ಯುತ್ತಮವಾದದ್ದನ್ನು ನೀಡಿದ್ದೇನೆ ಮತ್ತು ಇತರ ಸ್ವರೂಪಗಳಲ್ಲಿಯೂ ಅದನ್ನು ಮುಂದುವರಿಸುತ್ತೇನೆ. ಟಿ20 ವಿಶ್ವಕಪ್ ಗೆಲ್ಲುವುದು ನನ್ನ ಕನಸು ನನಸಾಯಿತು, ಇದು ನನ್ನ ಟಿ 20 ಅಂತರರಾಷ್ಟ್ರೀಯ ವೃತ್ತಿಜೀವನದ ಶಿಖರವಾಗಿದೆ. ನೆನಪುಗಳು, ಉತ್ಸಾಹ ಮತ್ತು ಅಚಲ ಬೆಂಬಲಕ್ಕಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ.

74 ಅಂತರರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿರುವ ಜಡೇಜ 515 ರನ್ ಗಳಿಸಿದ್ದು, 54 ವಿಕೆಟ್ ಪಡೆದಿದ್ದಾರೆ.

https://www.instagram.com/p/C81oDZyOUV1/?utm_source=ig_web_copy_link&igsh=MzRlODBiNWFlZA==

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...