
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಮುದಗಲ್ ಸಮೀಪ ಕಾರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.
ಬೈಕ್ ಸವಾರರಾದ ಅಂದಪ್ಪ(34), ಗದ್ದೆಪ್ಪ(28) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರ್ ಮತ್ತು ಬೈಕ್ ನಡುವೆ ಡಿಕ್ಕಿಯಾದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರ್ ಜಖಂಗೊಂಡಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.